ಶಿಕ್ಷಕ ನೇಮಕಾತಿ; ಕಲ್ಯಾಣ ಕರ್ನಾಟಕ, ಬೆಂಗಳೂರು ಜಿಲ್ಲೆ ಕೌನ್ಸಿಲಿಂಗ್ ದಿನಾಂಕ

ಬೆಂಗಳೂರು, ನವೆಂಬರ್ 02: ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ಸುತ್ತೋಲೆಯೊಂದನ್ನು ಹೊರಡಿಸಿದೆ. ವಿವಿಧ ಜಿಲ್ಲೆಗಳ ಕೌನ್ಸಿಲಿಂಗ್‌ ಪ್ರಕ್ರಿಯೆಯ ದಿನಾಂಕ ಘೋಷಣೆ ಮಾಡಿದೆ.

ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್‌ ಪ್ರಕ್ರಿಯೆಯ ಪ್ರಕಟಣೆಯನ್ನು ಹೊರಡಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.

Graduate Primary Teacher Recruitment Counseling Date For Kalyana Karnataka And Bengaluru

ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ದಿನಾಂಕ 04/11/2023ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ.

ಕೌನ್ಸಿಲಿಂಗ್‌ ಪ್ರಕ್ರಿಯೆ ವಿವರಗಳು; 2022ರ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ನೇ ತರಗತಿ) ನೇಮಕಾತಿಗೆ ಸಂಬಂಧಪಟ್ಟಂತೆ ಬಾಕಿ ಇದ್ದ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲೆಗಳ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.

ನೇಮಕಾತಿ-2022ಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲೆಗಳ 371ಜೆ ಹುದ್ದೆಗಳ ಬಗ್ಗೆ ಮಾನ್ಯ ನ್ಯಾಯಾಲಯಗಳಲ್ಲಿ ಪ್ರಕರಣಗಳಿದ್ದ ಕಾರಣದಿಂದ ತಡೆ ಹಿಡಿಯಲಾಗಿದ್ದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಮಾನ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂ.23162/2023, 23450/2023ರಲ್ಲಿನ ದಿನಾಂಕ 30/10/2023ರ ಆದೇಶ ಮತ್ತು ಇಡೀ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಈಗಾಗಲೇ ರಿಟ್ ಅಪೀಲು ಸಂಖ್ಯೆ: 305/2023 ರಲ್ಲಿನ ದಿನಾಂಕ: 12/10/2023ರ ಅದೇಶದ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾಯಾಲಯಗಳ ಆದೇಶದಿಂದ ಪ್ರಭಾವಿತವಾಗಬಹುದಾದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ನ್ನು ಮುಂದುವರೆಸಲಾಗಿದೆ.

ಈ ಬಗ್ಗೆ ಸದರಿ 371ಜೆ ಹುದ್ದೆಗಳಿರುವ (ಶೇಕಡ 80ರ ಸ್ಥಳೀಯ ವೃಂದ, ಶೇಕಡ 20ರ ಮಿಕ್ಕುಳಿದ ವೃಂದ ಮತ್ತು ಶೇಕಡ 8ರ ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳು) 9 ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕುರಿತಾಗಿ ದಿನಾಂಕ 08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ದಿನಾಂಕ 02/11/2023 ರಂದು https://schooleducation.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ 04/11/2023 ರಿಂದ ಬೆಳಿಗ್ಗೆ 10.30 ಗಂಟೆಯಿಂದ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗುವುದು.

ಆದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವ ಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು ಎಂದು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+