ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಚಾಯಿತಿ ಚುನಾವಣೆ; ನೇಮಕಾತಿಗೆ ನೀತಿ ಸಂಹಿತೆ ಅಡ್ಡಿ ಇದೆಯೇ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 04: ರಾಜ್ಯ ಚುನಾವಣಾ ಆಯೋಗ 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಯನ್ನು ಘೋಷಣೆ ಮಾಡಿದೆ. ಮಾದರಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 22 ಮತ್ತು 27ರಂದು ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಡಿಸೆಂಬರ್ 31ರ ಸಂಜೆಯ ತನಕ ನೀತಿ ಸಂಹಿತೆ ಗ್ರಾಮೀಣ ಮಟ್ಟದಲ್ಲಿ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯಿಂದಾಗಿ ನೇಮಕಾತಿಗೆ ಅಡ್ಡಿಯಾಗಲಿದೆಯೇ?.

ಗ್ರಾಮ ಪಂಚಾಯಿತಿ ಚುನಾವಣೆ; ನೀತಿ ಸಂಹಿತೆಯಲ್ಲಿ ಏನಿದೆ? ಗ್ರಾಮ ಪಂಚಾಯಿತಿ ಚುನಾವಣೆ; ನೀತಿ ಸಂಹಿತೆಯಲ್ಲಿ ಏನಿದೆ?

ಯಾವುದೇ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದ್ದರೆ ಅದನ್ನು ನಿಲ್ಲಿಸುವ ಅಗತ್ಯವಿರುವುದಿಲ್ಲ. ಆದರೆ, ನೇಮಕಾತಿಯನ್ನು ಈ ಸಮಯದಲ್ಲಿ ಅಂತಿಮಗೊಳಿಸಿ ನೇಮಕಾತಿ ಆಯ್ಕೆಪಟ್ಟಿ ಪ್ರಕಟಗೊಳಿಸಬಾರದು ಎಂದು ನೀತಿ ಸಂಹಿತೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆ; ಕೋವಿಡ್ ಮಾರ್ಗಸೂಚಿಗಳು ಗ್ರಾಮ ಪಂಚಾಯಿತಿ ಚುನಾವಣೆ; ಕೋವಿಡ್ ಮಾರ್ಗಸೂಚಿಗಳು

ಡಿಸೆಂಬರ್ 31ರ ತನಕ ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ, ನಗರ ಪಾಲಿಕೆ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿ ಹೊರತುಪಡಿಸಿ ಚುನಾವಣೆ ನಡೆಯುವ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಪ್ರದೇಶದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

Breaking: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆBreaking: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ

ನೇಮಕಾತಿ ಪ್ರಕ್ರಿಯೆ

ನೇಮಕಾತಿ ಪ್ರಕ್ರಿಯೆ

ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದರೆ ಅದನ್ನು ನಿಲ್ಲಿಸುವ ಅಗತ್ಯವಿಲ್ಲ. ಆದರೆ, ನೇಮಕಾತಿಯನ್ನು ಈ ಸಮಯದಲ್ಲಿ ಅಂತಿಮಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಸರ್ಕಾರಿ ಕಾರ್ಯಕ್ರಮ ಅಥವಾ ಯೋಜನೆಯು ನಡೆಯದಂತೆ ನಿರ್ಬಂಧವಿದೆ.

ನೇಮಕಾತಿಗೆ ಅವಕಾಶವಿಲ್ಲ

ನೇಮಕಾತಿಗೆ ಅವಕಾಶವಿಲ್ಲ

ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಯಾವುದೇ ತಾತ್ಕಲಿಕ ಹುದ್ದೆಗಳಿಗೆ ನೇಮಕಾತಿ ಮಾಡಲು ಅವಕಾಶವಿಲ್ಲ. ಆದರೆ, ಯಾವುದಾದರೂ ತುರ್ತು ಸೇವೆಗೆ ನೇಮಕಾತಿ ಅವಶ್ಯಕವಿದ್ದಲ್ಲಿ ಆಯೋಗದ ಅನುಮೋದನೆ ಪಡೆಯಬೇಕು. ಯಾವುದೇ ಇಲಾಖೆಯಲ್ಲಿ ಸಾಮಾನ್ಯ ಮುಂಬಡ್ತಿಯನ್ನು ನೀಡಬಹುದು. ಚುನಾವಣೆಗಳಿಗೆ ನಿಯೋಜಿಸಿದ ಯಾವುದೇ ಸಿಬ್ಬಂದಿಯ ವರ್ಗಾವಣೆಯನ್ನು ಮಾಡುವಂತಿಲ್ಲ.

ವಾಹನ ವಶಕ್ಕೆ ನೀಡುವುದು ಬೇಡ

ವಾಹನ ವಶಕ್ಕೆ ನೀಡುವುದು ಬೇಡ

ಶಾಸಕರು ಮತ್ತು ಸಂಸತ್ ಸದಸ್ಯರುಗಳಿಗೆ ಜಿಲ್ಲಾ ಮಟ್ಟದಲ್ಲಿ ಅಥವಾ ತಾಲೂಕು ಮಟ್ಟದಲ್ಲಿ ಅವರ ಸಾಮಾನ್ಯ ಕರ್ತವ್ಯ ನಿರ್ವಹಣೆಗೆ ಒದಗಿಸಲಾಗಿರುವ ವಾಹನವನ್ನು ಜಿಲ್ಲಾಧಿಕಾರಿಗಳು ವಶಕ್ಕೆ ತೆಗೆದುಕೊಳ್ಳುವ ಅಗತ್ಯವಿರುವುದಿಲ್ಲ. ಆದರೆ, ಚುನಾವಣಾ ಪ್ರಚಾರಗಳಿಗೆ ಅಥವಾ ಚುನಾವಣಾ ಸಂಬಂಧದ ಸೇವೆಗಳನ್ನು ನಡೆಸಲು ಸರ್ಕಾರಿ ವಾಹನ ಬಳಸಿದರೆ ತಕ್ಷಣ ವಶಕ್ಕೆ ಪಡೆಯಲಾಗುತ್ತದೆ.

ಹೊಸ ಕಾಮಗಾರಿಗಳು

ಹೊಸ ಕಾಮಗಾರಿಗಳು

ಭೂ ನ್ಯಾಯ ಮಂಡಳಿ ಸಮಿತಿ ಸಭೆಗಳನ್ನು ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನಡೆಸುವಂತಿಲ್ಲ. ಮಂತ್ರಿಗಳು ಅಥವಾ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಮತ್ತು ಇತರ ಸಭೆಗಳನ್ನು ನಡೆಸುವಂತಿಲ್ಲ.ಪಂಚಾಯಿತಿಗಳು ಚುನಾವಣಾ ಪೂರ್ವದಲ್ಲಿ ಪ್ರಾರಂಭಿಸಿರುವ, ಜಾರಿಯಲ್ಲಿರುವ ಕಾಮಗಾರಿಗಳ ಸಂಬಂಧ ಪಂಚಾಯಿತಿಯು ಹಣವನ್ನು ಪಾವತಿ ಮಾಡಲು ನೀತಿ ಸಂಹಿತೆ ಅಡ್ಡಿ ಇರುವುದಿಲ್ಲ. ಆದರೆ ಹೊಸ ಕಾಮಗಾರಿಗಳನ್ನು ಪ್ರಾರಂಭಿಸುವಂತಿಲ್ಲ.

ಯಾರ ವಾಹನ ವಶಕ್ಕೆ

ಯಾರ ವಾಹನ ವಶಕ್ಕೆ

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಹಾಗೂ ಎಪಿಎಂಸಿ ಅಧ್ಯಕ್ಷರಿಗೆ ಒದಗಿಸಲಾಗಿರುವ ಸರ್ಕಾರಿ ವಾಹನಗಳು ಚುನಾವಣೆ ಮುಕ್ತಾಯವಾಗುವವರೆಗೆ ಜಿಲ್ಲಾಧಿಕಾರಿಗಳ ವಶದಲ್ಲಿರತಕ್ಕದ್ದು. ಗ್ರಾಮೀಣ ಪ್ರದೇಶದಲ್ಲಿ ಮಂತ್ರಿಗಳು ಅಥವಾ ಶಾಸಕರು ಯಾವುದೇ ಕಾರ್ಯಕ್ರಮವನ್ನು ಆಯೋಜಿಸಿ ಮತದಾರರನ್ನು ಪ್ರಭಾವಿಸುವಂತಹ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

English summary
Election announced for 5762 gram panchayat in Karnataka. Voting will be held on December 22 and 27. Here are the list of code of conduct for the recruitment process.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X