Gram Panchayat; ಗ್ರಾಮ ಪಂಚಾಯಿತಿ ನೇಮಕಾತಿ, ಹೊಸ ಸುತ್ತೋಲೆ
ಬೆಂಗಳೂರು, ನವೆಂಬರ್ 14; ಗ್ರಾಮ ಪಂಚಾಯಿತಿಗಳ ನೇಮಕಾತಿ ಕುರಿತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದೆ. ಪಿಡಿಒ ಹುದ್ದೆಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ಆದೇಶ ಹೊರಡಿಸಿದೆ.
ಆಯುಕ್ತರು, ಕರ್ನಾಟಕ ಪಂ.ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಈ ಆದೇಶ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಸುತ್ತೋಲೆ 23/12/2014 ಉಲ್ಲೇಖ ಮಾಡಲಾಗಿದೆ.
ಆದೇಶದ ವಿವರಗಳು; ರಾಜ್ಯದಲ್ಲಿನ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಒಬ್ಬ ನೌಕರರಿಗೆ 3 ರಿಂದ 4 ಗ್ರಾಮ ಪಂಚಾಯತಿಗಳ ಪ್ರಭಾರ/ ಜವಾಬ್ದಾರಿ ನೀಡಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಉಲ್ಲೇಖಿತ ಸುತ್ತೋಲೆಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ತಿಳಿಸಲಾಗಿದೆ. ಸದರಿ ಸುತ್ತೋಲೆಯಂತೆ ಕ್ರಮವಹಿಸಲು ತಿಳಿಸಿದೆ ಎಂದು ಮಾಹಿತಿ ನೀಡಲಾಗಿದೆ.
ಕರ್ನಾಟಕ ಸರ್ಕಾರದ ಸಚಿವಾಲಯ ಬಹುಮಹಡಿಗಳ ಕಟ್ಟಡ, ಬೆಂಗಳೂರು. (ಕೆ. ಯಾಲಕ್ಕಿ ಗೌಡ) ನಿರ್ದೇಶಕರು (ಪಂ.ರಾಜ್) ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಈ ಸುತ್ತೋಲೆ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿತ್ತು.
ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ನೌಕರರನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಭಾರ ವ್ಯವಸ್ಥೆಯಲ್ಲಿ ಇರಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಹಲವಾರು ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ ಒಬ್ಬ ನೌಕರನಿಗೆ 3 ರಿಂದ 4 ಗ್ರಾಮ ಪಂಚಾಯತಿಗಳ ಪ್ರಭಾರ/ ಜವಾಬ್ದಾರಿ ನೀಡಿರುವುದು ಗ್ರಾಮ ಪಂಚಾಯತಿಗಳ ಆಡಳಿತದ ಹಿತದೃಷ್ಠಿಯಿಂದ ಸೂಕ್ತವಾಗದಿರುವುದಾಗಿ ಮಾನ್ಯ ಶಾಸಕರುಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಗಮನಕ್ಕೆ ತಂದಿರುತ್ತಾರೆ ಎಂದು ಸುತ್ತೋಲೆಯಲ್ಲಿ ವಿವರಣೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿ ನೇಮಿಸಲು ಕ್ರಮ ವಹಿಸಲು ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ.
ನಿಯಮಗಳು
* ಗ್ರೇಡ್-1 ವೃಂದದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಅವರು ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯ ಜೊತೆಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿ ಇಡತಕ್ಕದ್ದು.
* ಗ್ರೇಡ್-2 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಖಾಲಿ ಇದ್ದಲ್ಲಿ ಅಂತಹ ಹುದ್ದೆಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಗ್ರಾಮ ಪಂಚಾಯಿತಿ ಕಾರ್ಯದರ್ಶಿರವರನ್ನೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಹೆಚ್ಚುವರಿ ಪ್ರಭಾರದಲ್ಲಿರಿಸತಕ್ಕದ್ದು.
* ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-2 ಎರಡೂ ಹುದ್ದೆಗಳು ಖಾಲಿ ಇದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನೇ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿರಿಸತಕ್ಕದ್ದು,
* ಒಬ್ಬ ನೌಕರನನ್ನು ಅವರು ಕರ್ತವ್ಯ ನಿರ್ವಹಿಸುವ ಗ್ರಾಮ ಪಂಚಾಯಿತಿಗೆ ಮಾತ್ರ ಹೆಚ್ಚುವರಿ
ಪ್ರಭಾರದಲ್ಲಿರಿಸತಕ್ಕದ್ದು.
ಈ ವ್ಯವಸ್ಥೆಯು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ ಖಾಲಿ ಹುದ್ದೆಗಳು ನೇರ ನೇಮಕಾತಿ/ ಬಡ್ತಿ ಮೂಲಕ ಭರ್ತಿಯಾಗುವೆವರೆಗೆ ಮಾತ್ರ ಅನ್ವಯಿಸುತ್ತದೆ. ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದೆ ಎಂದು ಸುತ್ತೋಲೆಯಲ್ಲಿ ವಿವರಣೆ ನೀಡಲಾಗಿದೆ.












Click it and Unblock the Notifications