Gram Panchayat; KPSC ಭರ್ತಿ ಮಾಡುವ ಹುದ್ದೆಗಳ ಸಂಖ್ಯೆ, ವೇತನ

ಬೆಂಗಳೂರು, ಆಗಸ್ಟ್ 04; ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿ ಮಾಡಲು ಈಗಾಗಲೇ ಆದೇಶ ನೀಡಿದೆ. ಯಾವ-ಯಾವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ? ಎಂಬುದು ಪ್ರಶ್ನೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ನೇರ ನೇಮಕಾತಿ ಕೋಟಾದ ಖಾಲಿ ಹುದ್ದೆಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ತುಂಬಲಾಗುತ್ತದೆ.

gram-panchayat-recruitment

ಸದ್ಯ ಭರ್ತಿ ಮಾಡಲಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಮ್ ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ಸಂಖ್ಯೆ, ವೇತನ ಶ್ರೇಣಿ, ವಿದ್ಯಾರ್ಹತೆ ಮುಂತಾದ ವಿವರಗಳು ಇಲ್ಲಿವೆ.

ವಿವರಗಳು; ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಮ್ ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2. ಭರ್ತಿ ಮಾಡಬೇಕಾದ ಹುದ್ದೆಗಳು ಉಳಿಕೆ ವೃಂದ 263, ಹೈದರಾಬಾದ್-ಕರ್ನಾಟಕ 87 ಒಟ್ಟು 350. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಮ್ ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ರೂ. ತನಕ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿ ಪಿಯುಸಿ ಅಥವ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು.

ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಒಟ್ಟು ಹುದ್ದೆಗಳ ಸಂಖ್ಯೆ 151. ಉಳಿಕೆ ವೃಂದ 55, ಹೈದರಾಬಾದ್-ಕರ್ನಾಟಕ ವೃಂದ 96 ಹುದ್ದೆಗಳು. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.

ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಯ್ಕೆಯಾದವರಿಗೆ 21,400 ರಿಂದ 42,000 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಪಿಯುಸಿ ಅಥವ ತತ್ಸಮಾನ ಪರೀಕ್ಷೆ ತೇರ್ಗಡೆಯಾಗಿರಬೇಕು.

ಅಭ್ಯರ್ಥಿಗಳ ಆಯ್ಕೆಪಟ್ಟಿ ತಯಾರಿ; ನೇಮಕಾತಿಗಾಗಿ ರಚನೆ ಮಾಡಿದ ವಿಶೇಷ ಆಯ್ಕೆ ಸಮಿತಿಯು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅವರು ಗಳಿಸಿದ ಒಟ್ಟು ಶೇಕಡವಾರು ಅಂಕಗಳನ್ನು ಆಧರಿಸಿ ನಿರ್ಧರಿಸಿದ ಮೆರಿಟ್ ಅನುಸಾರ ಹಾಗೂ ಚಾಲ್ತಿಯಲ್ಲಿರುವ ಯಾವುದೇ ಕಾನೂನು ಅಥವಾ ಆದೇಶಾನುಸಾರ ಕಲ್ಪಿಸಿರುವ ಮೀಸಲಾತಿಗೆ ಒಳಪಟ್ಟು ಪ್ರತಿ ವರ್ಗದ ಹುದ್ದೆಗೆ ಅಧಿಸೂಚಿಸಿರುವ ಖಾಲಿ ಹುದ್ದೆಗಳ ಸಂಖ್ಯೆಗೆ ಸಮನಾಗಿ ನೇಮಕಾತಿಗೆ ಅರ್ಹರಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಿ ಪ್ರಕಟಿಸುತ್ತಾರೆ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮನಾದ ಶೇಕಡಾವಾರು ಅಂಕಗಳನ್ನು ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತಾ ಕ್ರಮಾಂಕವನ್ನು ಅವರ ವಯಸ್ಸನ್ನಾಧರಿಸಿ, ವಯಸ್ಸಿನಲ್ಲಿ ಹಿರಿಯರಾದ ಅಭ್ಯರ್ಥಿಯನ್ನು ಅರ್ಹತಾ ಪಟ್ಟಿಯಲ್ಲಿ ಮೇಲಿನ ಕ್ರಮಾಂಕದಲ್ಲಿ ನಿಗದಿಮಾಡತಕ್ಕದ್ದು ಎಂದು ನಿಯಮ ಹೇಳಿದೆ.

ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗಳು ನಿಯಮಗಳಡಿ ನಿರ್ದಿಷ್ಟಪಡಿಸಿದ ಎಲ್ಲಾ ಖಾಲಿ ಹುದ್ದೆಗಳು ಭರ್ತಿಯಾಗುವವರೆಗೆ ಅಥವಾ ಈ ವೃಂದಗಳ ಮುಂದಿನ ಆಯ್ಕೆ ಪಟ್ಟಿಗಳು ಪ್ರಕಟವಾಗುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾನ್ಯತೆ ಹೊಂದಿರತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+