KPSC; ಗ್ರಾಮ ಪಂಚಾಯಿತಿ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು, ಜುಲೈ 19; ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, ಪಿ. ನವೀನ್‌ ಕುಮಾರ್, ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಗ್ರಾಪಂ) ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಅಧಿಸೂಚನೆ ಹೊರಡಿಸಿದ್ದಾರೆ.

Gram Panchayat Recruitment From KPSC Says Notification

ಅಧಿಸೂಚನೆ ವಿಷಯ; ಸರ್ಕಾರದ ಅಧಿಸೂಚನೆ ದಿನಾಂಕ 21/01/2020ರಂದು ಹೊರಡಿಸಿರುವ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಸರ್ಕಾರ ಶಾಖೆ), ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇಮಕಾತಿ (ವಿಶೇಷ) ನಿಯಮಗಳು 2019 ಅನ್ನು ಹಿಂಪಡೆಯಲಾಗಿದೆ ಎಂದು ಅಧಿಸೂಚನೆ ಹೇಳಿದೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಸಹಾಯಕ ಗ್ರೇಡ್-1, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ನೇರ ನೇಮಕಾತಿ ಕೋಟಾದ ಖಾಲಿ ಹುದ್ದೆಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ಆಯ್ಕೆ ಮೂಲಕ ನೇಮಕಾತಿ ಮಾಡಲು ಆದೇಶಿಸಿದೆ ಎಂದು ತಿಳಿಸಿದೆ.

ವಿವಿಧ ಹುದ್ದೆಗಳ ಭರ್ತಿ; ಕರ್ನಾಟಕ ಸರ್ಕಾರ ಈಗಾಗಲೇ ಗ್ರಾಮ ಪಂಚಾಯತಿ ಮಟ್ಟದಲ್ಲಿನ ನೇಮಕಾತಿಗಳ ಕುರಿತು ವಿಧಾನಸಭೆ ಕಲಾಪದಲ್ಲಿ ಮಾಹಿತಿ ನೀಡುತ್ತಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಒಟ್ಟು ಮಂಜೂರಾಗಿರುವ ಹುದ್ದೆಗಳು 2194. ಇವುಗಳಲ್ಲಿ ಸದ್ಯ 604 ಹುದ್ದೆ ಖಾಲಿ ಇದೆ.

ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಗ್ರೇಡ್-2 ಒಟ್ಟು ಮಂಜೂರಾಗಿರುವ ಹುದ್ದೆಗಳು 3108. 345 ಹುದ್ದೆಗಳು ಖಾಲಿ ಇವೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಟ್ಟು ಮಂಜೂರಾಗಿರುವ ಹುದ್ದೆಗಳು 6021. ಇವುಗಳಲ್ಲಿ 5321 ಹುದ್ದೆಗಳು ಭರ್ತಿಯಾಗಿವೆ. 660 ಹುದ್ದೆಗಳು ಖಾಲಿ ಇದೆ ಎಂದು ಸರ್ಕಾರ ಹೇಳಿದೆ. ಪಿಡಿಒಗಳ 150 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ.

ಕರ್ನಾಟಕದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಇದಕ್ಕಾಗಿ ಪಂಚಾಯತ್ ರಾಜ್ ಆಯುಕ್ತಾಲಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಪತ್ರವನ್ನು ಬರೆದು, ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಕಳೆದ ತಿಂಗಳು ಸಂಗ್ರಹ ಮಾಡಿದೆ.

ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಖಾಲಿ ಇರುವ ಹುದ್ದೆಗಳ ಅಂಕಿ ಸಂಖ್ಯೆಗಳನ್ನು ಸಂಗ್ರಹ ಮಾಡಿದೆ. ಆಗಸ್ಟ್‌ ತಿಂಗಳಿನಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+