Gram Panchayat; ನೇಮಕಾತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ
ಬೆಂಗಳೂರು, ಡಿಸೆಂಬರ್ 18; ಕರ್ನಾಟಕ ಸರ್ಕಾರ ಈ ಹಿಂದೆ ಘೋಷಣೆ ಮಾಡಿದಂತೆ ಗ್ರಾಮ ಪಂಚಾಯಿತಿ ಮಟ್ಟದ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ನೇಮಕಾತಿಯಲ್ಲಿ ಹೊಸ ನಿಯಮ ಜಾರಿಗೆ ಬರಲಿದೆ.
ಗ್ರಾಮ ಆಡಳಿತಾಧಿಕಾರಿ (Village Administration Officer) ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಕುರಿತು ವಿಶೇಷ ರಾಜ್ಯಪತ್ರದಲ್ಲಿ ಆದೇಶವನ್ನು ಸಹ ಹೊರಡಿಸಲಾಗಿದೆ. ನೇಮಕಾತಿ ನಿಯಮ ಬದಲಾವಣೆ ಮಾಡುವುದಾಗಿ ಈ ಹಿಂದೆಯೇ ಸರ್ಕಾರ ತಿಳಿಸಿತ್ತು.

ಇದುವರೆಗೂ ಗ್ರಾಮ ಆಡಳಿತಾಧಿಕಾರಿಯನ್ನು ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಈ ನಿಯಮಕ್ಕೆ ಬದಲಾವಣೆ ತರಲು ವರದಿ ನೀಡುವಂತೆ ಸಮಿತಿಯನ್ನು ಸಹ ರಚನೆ ಮಾಡಲಾಗಿತ್ತು. ಸಮಿತಿ ಶಿಫಾರಸು ಒಪ್ಪಿದ್ದು, ಹೊಸ ಆದೇಶ ಪ್ರಕಟವಾಗಿದೆ.
ಸ್ಮರ್ಧಾತ್ಮಕ ಪರೀಕ್ಷೆಗಳು; ರಾಜ್ಯ ಸರ್ಕಾರ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಗ್ರಾಮ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಕುರಿತು ಆದೇಶವನ್ನು ಹೊರಡಿಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ 1978ರ (1990ರ ಕರ್ನಾಟಕ ಅಧಿನಿಯಮ14) ಸೇರಿದಂತೆ ವಿವಿಧ ನಿಯಮಗಳಲ್ಲಿ ತಿದ್ದುಪಡಿ ತರಲಾಗಿದೆ.
ರಾಜ್ಯಪತ್ರದಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆಗಳನ್ನು ಸ್ವೀಕರಿಸಿ, ಅವುಗಳನ್ನು ಪರಿಶೀಶಲಿಸಿ ಅಂತಿಮ ಆದೇಶವನ್ನು ಹೊರಡಿಸಲಾಗುತ್ತದೆ.
ಯಾವುದೇ ವ್ಯಕ್ತಿ ಅಥವ ಸಂಸ್ಥೆ ಈ ನಿಯಮಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ, ಬಹುಮಹಡಿಗಳ ಕಟ್ಟಡ, ಬೆಂಗಳೂರು 560001 ಈ ವಿಳಾಸಕ್ಕೆ ಕಳಿಸಬಹುದು. ಹೊಸ ನಿಯಮವನ್ನು ಕರ್ನಾಟಕ ಸಾಮಾನ್ಯ ಸೇವೆಗಳು (ಕಂದಾಯ ಅಧೀನ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2023 ಎಂದು ಕರೆಯಲಾಗುತ್ತದೆ.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 'ಗ್ರಾಮ ಲೆಕ್ಕಿಗ' ಎಂಬ ಪದನಾಮವನ್ನು 'ಗ್ರಾಮ ಆಡಳಿತಾಧಿಕಾರಿ' ಎಂದು ಬದಲಾವಣೆ ಮಾಡಲಾಗಿತ್ತು. ಆಗಲೇ ಈ ಹುದ್ದೆಯ ನೇಮಕಾತಿ ನಿಯಮಗಳ ಬದಲಾವಣೆಗೆ ತೀರ್ಮಾನಿಸಲಾಗಿತ್ತು. ಈಗ ಅದು ಘೋಷಣೆಯಾಗಿದೆ.
ಗ್ರಾಮ ಆಡಳಿತಾಧಿಕಾರಿ ನೇಮಕ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವ ಕರ್ನಾಟಕ ಲೋಕಸೇವಾ ಆಯೋಗ ಅಥವ ಕೇಂದ್ರ ಅಥವ ರಾಜ್ಯದ ಒಡೆತನದ ಯಾವುದೇ ರಾಷ್ಟ್ರೀಯ ಅಥವ ರಾಜ್ಯ ಮಟ್ಟದ ಸಂಸ್ಥೆಗಳು ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತವೆ. ಸ್ಮರ್ಧಾತ್ಮಕ ಪರೀಕ್ಷೆಯ ಅಂಕಗಳು, ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿ ನಡೆಯಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವವರು ಪದವಿ ಪೂರ್ವ ಪರೀಕ್ಷೆ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರತಿ ಗ್ರಾಮ ಆಡಳಿತಾಧಿಕಾರಿ ನೇಮಕದ ನಂತರ ಪ್ರೊಬೆಷನರಿ ತರಬೇತಿ ಪಡೆಯಬೇಕು. ಆರು ತಿಂಗಳು ಕಡಿಮೆ ಇಲ್ಲದ ಅವಧಿಗೆ ತರಬೇತಿ ಕೋರ್ಸ್ ಮತ್ತು ಒಂದು ವರ್ಷದೊಳಗೆ ರಾಜ್ಯ ಸರ್ಕಾರ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications