ಕರ್ನಾಟಕದಲ್ಲಿ ಉದ್ಯೋಗಾವಕಾಶ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಉದ್ಯೋಗ ಹುಡುಕುತ್ತಿರುವವರು ಹಾಗೂ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೆಲವೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ಇಷ್ಟಕ್ಕೂ ಈ ವಿಚಾರವಾಗಿ ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೇನು ಎನ್ನುವ ವಿವರ ನೋಡೋಣ.
ಕರ್ನಾಟಕದಲ್ಲಿ ನೂತನ ಜಿಟಿಟಿಸಿ (Government Tool Room and Training Centre) ಕೇಂದ್ರಗಳ ಸ್ಥಾಪನೆ ಕುರಿತು ಮಂಗಳವಾರ ನವೆಂಬರ್ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು ಕೆಲವೊಂದು ಪ್ರಮುಖ ನಿರ್ಧಾರಗಳನ್ನು ಈ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಂದುವರಿದು ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್ ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುವುದು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಅಲ್ಲದೇ ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಕಂಪನಿಗಳಲ್ಲಿಯೂ ಸೇರಿದಂತೆ ಶೇಕಡ 100 ರಷ್ಟು ನೇಮಕಾತಿ ಆಗುತ್ತಿದೆ ಎನ್ನುವುದು ಪಾಸಿಟಿವ್ ವಿಷಯ. ಯಾವ ಕೋರ್ಸ್‌ಗಳಿಗೆ ಬೇಡಿಕೆ ಇದೆ ಅಂತಹ ಕೋರ್ಸ್‌ಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಲಾಗುವುದು ಎಂದಿದ್ದಾರೆ.
ಜಿಟಿಟಿಸಿ ಉತ್ಪಾದನಾ ಕೇಂದ್ರದಲ್ಲಿ ಇಸ್ರೋದ ಚಂದ್ರಯಾನ ನೌಕೆ ಲೂನಾರ್ ರೋವರ್ ಚಕ್ರದ ಉತ್ಪಾದನೆ ಸೇರಿದಂತೆ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಮಾಡಲಾಗುತ್ತಿದೆ. ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳೊಂದಿಗೆ ಜಿಟಿಟಿಸಿ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.












Click it and Unblock the Notifications