ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು, ಜೂನ್ 07: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 9ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 9ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸ್ನಾತಕ ಪದವಿಯಲ್ಲಿ ಪರಿಸರ ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ವಿಭಾಗದಲ್ಲಿ ರಸಾಯನಶಾಸ್ತ್ರ ಸೂಕ್ಷ್ಮಜೀವಶಾಸ್ತ್ರ ಮತ್ತು ಪರಿಸರ ವಿಜ್ಞಾನ ಬೋಧಕ ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Guest Faculty Jobs In Tumakuru University : Aplly Online

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ; ತುಮಕೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು tumkuruniversity.ac.in ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ. ತುಮಕೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಸಂವಹನದ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಗುರುತು ಪತ್ರ (ಐಡಿ), ವಯಸ್ಸು, ಶೈಕ್ಷಣಿಕ ಅರ್ಹತೆ, ಸ್ವವಿವರ ಮತ್ತು ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ತುಮಕೂರು ವಿಶ್ವವಿದ್ಯಾಲಯದ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ದಾಖಲಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

Guest Faculty Jobs In Tumakuru University : Aplly Online

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು (Submit) ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ದಾಖಲಿಸಿಕೊಳ್ಳಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+