ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿಥಿ ಉಪನ್ಯಾಸಕ ಹುದ್ದೆ: ಮೂರು ದಿನಗಳಲ್ಲಿ 30,000ಕ್ಕೂ ಹೆಚ್ಚು ಅರ್ಜಿ

|
Google Oneindia Kannada News

ಬೆಂಗಳೂರು, ಜ.20: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಅರ್ಜಿ ಸಲ್ಲಿಕೆಗೆ ಜ.17ರಿಂದ ಅವಕಾಶ ನೀಡಲಾಗಿತ್ತು. ಗುರುವಾರ (ಜ.20) ವೇಳೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು,ರಾಜ್ಯ ಸರಕಾರವು ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ' ಎಂದಿದ್ದಾರೆ.

Guest Lecturer post: Over 30,000 applications in three days

ಅಲ್ಲದೆ, ಅರ್ಜಿ ಹಾಕಿಕೊಳ್ಳಲು ಶುಕ್ರವಾರ (ಜ.21) ಮಧ್ಯರಾತ್ರಿ 12 ಗಂಟೆಯವರೆಗೂ ಅವಕಾಶವಿದೆ. ಇದುವರೆಗೂ ಅರ್ಜಿ ಹಾಕದೆ ಇರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂಥವರು https://dec.karnataka/gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಇಷ್ಟದ ಆಯ್ದ 10 ಸರಕಾರಿ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಆಯ್ಕೆಯಾದವರಿಗೆ ಈ ಕಾಲೇಜುಗಳಲ್ಲೇ ಕಾರ್ಯನಿರ್ವಹಿಸಲು ಆದಷ್ಟು ಮಟ್ಟಿಗೆ ಅವಕಾಶ ಕೊಡಲಾಗುವುದು. ಒಂದು ವೇಳೆ, ಅಭ್ಯರ್ಥಿಗಳ ಆಯ್ಕೆಯ ಕಾಲೇಜುಗಳಲ್ಲಿ ವಾರಕ್ಕೆ 15 ಗಂಟೆಗಳ ಕಾರ್ಯಭಾರ ಇಲ್ಲದಿದ್ದ ಪಕ್ಷದಲ್ಲಿ ಮಾತ್ರ ಬೇರೆ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುವುದು ಎಂದು ಅವರು ಹೇಳಿದ್ದಾರೆ.

ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿರುವವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಅಲ್ಲದೆ, ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ, ನಾನಾ ಮಾನದಂಡಗಳ ಅನ್ವಯ ರಾಜ್ಯವ್ಯಾಪ್ತಿಯ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಹತೆ ಮತ್ತು ಅಂಕಗಳ ವಿವರ

ಅತಿಥಿ ಉಪನ್ಯಾಸಕರ ನೇಮಕಾತಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಪೈಕಿ ಶೇ.15ರಷ್ಟನ್ನು ಪರಿಗಣನೆಗೆ ತೆಗೆದುಕೊಂಡು, ಇದಕ್ಕೆ ಗರಿಷ್ಠ 25 ಅಂಕಗಳನ್ನು ಕೊಡಲಾಗುವುದು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳಿದಂತೆ, ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಸ್ಲೆಟ್ ಮತ್ತು ಎಂ.ಫಿಲ್ ಪದವಿಗಳನ್ನು ಹೆಚ್ಚುವರಿ ವಿದ್ಯಾರ್ಹತೆ ಎಂದು ಪರಿಗಣಿಸಿದ್ದು, ಇವುಗಳಿಗೆ ಕ್ರಮವಾಗಿ ಗರಿಷ್ಠ 12, 9 ಮತ್ತು 6 ಅಂಕಗಳನ್ನು ನೀಡಲಾಗುವುದು. ಜತೆಗೆ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಒಂದು ವರ್ಷಕ್ಕೆ (ಗರಿಷ್ಠ 16 ವರ್ಷಗಳಿಗೆ ಮಾತ್ರ ಅನ್ವಯವಾಗುವಂತೆ 48 ಅಂಕಗಳು) 3 ಅಂಕಗಳನ್ನು ಕೊಡಲಾಗುವುದು. ಈ ಅವಧಿಯಲ್ಲಿ ಶೈಕ್ಷಣಿಕ ವರ್ಷದ ಒಂದು ಸೆಮಿಸ್ಟರ್ ನಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ 1.5 ಅಂಕಗಳನ್ನು ಮಾತ್ರ ನೀಡಲಾಗುವುದು. ನೇಮಕಾತಿಯಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ಕೊಡಲಾಗುವುದು ಎಂದು ಅವರು ವಿವರಿಸಿದ್ದಾರೆ.

Recommended Video

Legends League Cricket: Virender Singh ನೇತೃತ್ವದಲ್ಲಿ ಇಂಡಿಯಾ ಮಹಾರಾಜ ತಂಡ!! | Oneindia Kannada

ಸರಕಾರವು ಕಳೆದ ವಾರ ಅತಿಥಿ ಉಪನ್ಯಾಸಕರ ವೇತನವನ್ನು ಗರಿಷ್ಠ 32 ಸಾವಿರ ರೂ.ವರೆಗೂ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವುದನ್ನು ಇಲ್ಲಿ ನೆನೆಯಬಹುದು.

English summary
The call for online applications for the appointment of guest lecturers of government first-grade colleges for the academic year 2021-22 has seen enthusiastic response having received more than 30,000 submissions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X