ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕ ಹುದ್ದೆ, ಅರ್ಹತೆಗಳು

|
Google Oneindia Kannada News

ಬೆಂಗಳೂರು, ಜನವರಿ 06; ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆ 2022-23ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ ನೇಮಕಾತಿ ನಡೆಯಲಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.

ಉಪನ್ಯಾಸಕರ ಹುದ್ದೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌; ಸೂಚನೆಗಳು ಉಪನ್ಯಾಸಕರ ಹುದ್ದೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌; ಸೂಚನೆಗಳು

ಆಸಕ್ತ ಅಭ್ಯರ್ಥಿಗಳು 10/1/2023ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿದೆ. ಮೆರಿಟ್ ಪಟ್ಟಿಯ ಅನ್ವಯ ಸ್ಥಳ ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕ 16/1/2023 ರಿಂದ 25/1/2023 ಆಗಿದೆ.

Breaking; ನೇರ ನೇಮಕಾತಿ ಮತ್ತು ಮುಂಬಡ್ತಿ ಬಗ್ಗೆ ಹೊಸ ಸುತ್ತೋಲೆBreaking; ನೇರ ನೇಮಕಾತಿ ಮತ್ತು ಮುಂಬಡ್ತಿ ಬಗ್ಗೆ ಹೊಸ ಸುತ್ತೋಲೆ

Guest Lecturer Recruitment Eligibility For Candidates

ಸ್ಥಳ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು1/2/2023 ಕೊನೆಯ ದಿನವಾಗಿದೆ ಎಂದು ಅಧಿಸೂಚನೆ ತಿಳಿಸಿದೆ.

KPSC Recruitment; ಅಂಗವಿಕಲರ ವಿಶೇಷ ಗುರುತಿನ ಚೀಟಿ ಪರಿಗಣನೆ ಆದೇಶ KPSC Recruitment; ಅಂಗವಿಕಲರ ವಿಶೇಷ ಗುರುತಿನ ಚೀಟಿ ಪರಿಗಣನೆ ಆದೇಶ

ಮಾನದಂಡಗಳು; ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ವಿಷಯವಾರು ಮೆರಿಟ್ ಲಿಸ್ಟ್ ಆಧಾರದ ಮೇಲೆ ಮೆರಿಟ್ ಲಿಸ್ಟ್ ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ವಿದ್ಯಾರ್ಹತೆ (ಗರಿಷ್ಠ 25 ಅಂಕಗಳು). ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ 25 ಅನ್ನು ಗಣನೆಗೆ ತೆಗೆದುಕೊಳ್ಳುವುದು.

ಅಭ್ಯರ್ಥಿಯು ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25ರಷ್ಟು ಭಾಗವನ್ನು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು.

ಹೆಚ್ಚುವರಿ ವಿದ್ಯಾರ್ಹತೆ. ಪಿಹೆಚ್‌ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12, ಎನ್ಇಟಿ/ ಕೆ-ಸೆಟ್/ ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 9, ಎಂ.ಫಿಲ್, ವಿದ್ಯಾರ್ಹತೆ ಪಡೆದಿದ್ದಲ್ಲಿ 6 ಅಂಕಗಳು.

Guest Lecturer Recruitment Eligibility For Candidates

ಅನುಭವ: ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳನ್ನು ಮಿತಿಗೊಳಿಸುವುದು.

(ಪ್ರತಿ ಶೈಕ್ಷಣಿಕ ವರ್ಷದ ಪೂರ್ಣ ಅವಧಿ ಸೇವೆಗೆ 3 ಅಂಕಗಳು, ಶೈಕ್ಷಣಿಕ ವರ್ಷದಲ್ಲಿ ಸೆಮಿಸ್ಟರ್ ನಲ್ಲಿ ಮಾತ್ರ ಸೇವೆ ಸಲ್ಲಿಸಿದ್ದರೆ 1.5 ಅಂಕಗಳು) ತಿಂಗಳವರೆಗಿನ ಸೇವಾ ಅವಧಿಗೆ 0.5 ಅಂಕ, 1 ತಿಂಗಳು ಮೇಲ್ಪಟ್ಟು 2 ತಿಂಗಳವರೆಗಿನ ಸೇವಾ ಅವಧಿಗೆ 1 ಅಂಕ ಹಾಗೂ 2 ತಿಂಗಳು ಮೇಲ್ಪಟ್ಟು ಸೇವಾ ಅವಧಿಗೆ 1.5 ಅಂಕಗಳು).

ಅಭ್ಯರ್ಥಿಗಳಿಗೆ ಮಾಹಿತಿ

* ಅಭ್ಯರ್ಥಿಗಳು ಪ್ರಾಂಶುಪಾಲರಿಂದ ಹೊಸದಾಗಿ ನಿಗದಿಪಡಿಸಿರುವ ಸೇವಾ ಪ್ರಮಾಣ ಪತ್ರದ ನಮೂನೆಯಲ್ಲಿ ಸೇವಾ ಅವಧಿಯ ವಿವರಗಳನ್ನು ಪಡೆದು, ಸದರಿ ಸೇವಾ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸುವುದು. (ಮಾದರಿ ಸೇವಾ ಪಮಾಣ ಪತ್ರದ ನಮೂನೆಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ)

* ಮೇಲೆ ತಿಳಿಸಿದ ಮಾನದಂಡಗಳನ್ನು ಅನುಸರಿಸಿ, ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ರಾಜ್ಯವ್ಯಾಪಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.

* ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಲ್ಲಿ ವಿಷಯವಾರು ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಅರ್ಹ ಅಭ್ಯರ್ಥಿಗಳ ರಾಜ್ಯವ್ಯಾಪಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು.

* ಅರ್ಹ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ಕೌನ್ಸಿಲಿಂಗ್ ಗೆ ಹಾಜರಾಗದೆ ಇರುವ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್‌ಗೆ ಅವಕಾಶ ನೀಡಲಾಗುವುದಿಲ್ಲ.

* ಒಂದು ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದಲ್ಲಿ, ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಿ, ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

* ಆನ್‌ಲೈನ್‌ ಮೂಲಕ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕುರಿತು ಎಲ್ಲಾ ಸರ್ಕಾರಿ ಕಾಲೇಜು ಪ್ರಾಂಶುಪಾಲರು ತಮ್ಮ ಕಾಲೇಜುಗಳ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸುವುದರೊಂದಿಗೆ, ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾಹಿತಿಯನ್ನು ನೀಡುವುದು.

* ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ರಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಸದರಿ ಅಂತರ್ಜಾಲ ತಾಣವನ್ನು ಪ್ರತಿನಿತ್ಯ ಗಮನಿಸಲು ತಿಳಿಸಲಾಗಿದೆ.

English summary
Guest lecturer recruitment for govt first grade college. Here are the eligibility list for the candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X