ಪದವಿ ಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ನೇಮಕ, ಗೌರವ ಧನದ ವಿವರ
ಬೆಂಗಳೂರು, ಜೂನ್ 02: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾರಿಗೆ ಒಪ್ಪಿಗೆ ನೀಡಲಾಗಿದೆ. ಈ ಕುರಿತು ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜ್ಞಾಪನಾ ಪತ್ರವನ್ನು ಹೊರಡಿಸಿದೆ. ನಿರ್ದೇಶಕರು ಹೊರಡಿಸಿರುವ ಪತ್ರವು 2024-25 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ಮಾಡಿಕೊಳ್ಳುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.
ಸರ್ಕಾರ 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ. 12,000 ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಿದೆ.

ಮಾರ್ಚ್ 2025ರ ಅಂತ್ಯಕ್ಕೆ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿಸಿದೆ ಎಂದು ಪತ್ರದಲ್ಲಿ ತಿಳಿಸಿದೆ. ಖಾಲಿಯಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು ಕಡಿಮೆ ಕಾರ್ಯಭಾರವಿರುವ ವಿಷಯಗಳ ಉಪನ್ಯಾಸಕರುಗಳಿಂದ ಸರಿದೂಗಿಸಿದ ನಂತರ ಉಳಿದ ಹುದ್ದೆಗಳಿಗೆ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕಾದ ಸಂಖ್ಯೆ, ಸಂಯೋಜನೆಯನ್ನು ಮಂಜೂರು ಮಾಡಿ, ಹುದ್ದೆ ಮಂಜೂರು ಮಾಡದ ವಿಷಯಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕಾದ ಸಂಖ್ಯೆಯನ್ನು ಹಾಗೂ ನೇಮಕ ಮಾಡಿಕೊಳ್ಳಬೇಕಾದ ಒಟ್ಟು ಅತಿಥಿ ಉಪನ್ಯಾಸಕರ ಸಂಖ್ಯೆ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಕೋರಲಾಗಿತ್ತು.
ಸರ್ಕಾರದ ಆದೇಶ ದಿನಾಂಕ 4/7/2016ರಲ್ಲಿನ ಷರತ್ತಿಗೊಳಪಟ್ಟು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಅವಧಿಗೆ ಖಾಲಿಯಿರುವ ಬೋಧಕ ಹುದ್ದೆಗಳಿಗೆದುರಾಗಿ ಒಟ್ಟು 4,689 ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದೆ.
ನಿಯಮಗಳು
* ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55ರಷ್ಟು ಅಂಕಗಳನ್ನು ಪಡೆದುಕೊಂಡ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರಾಗಿ ನೇಮಕ ಮಾಡಿಕೊಳ್ಳುವುದು. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ, ಕಡಿಮೆ ಕಾರ್ಯಭಾರ ಹೊಂದಿರುವ ವಿಷಯಗಳ ಉಪನ್ಯಾಸಕರನ್ನು ಜಿಲ್ಲೆಯ ಇತರೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನಿಯೋಜಿಸಿದ ನಂತರ ಉಳಿಕೆ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸುವುದು.
* ಉಪನ್ಯಾಸಕರೇ ಇಲ್ಲದಿರುವ ಕಡೆ ಹಾಗೂ ನಿಯೋಜನೆಯಂತಹ ಬದಲಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲದಿರುವ ಕಡೆ ಮಾತ್ರ ಅತಿಥಿ ಉಪನ್ಯಾಸಕರನ್ನು ಉಪಯೋಗಿಸಿಕೊಳ್ಳಬಹುದು. ಮಂಜೂರಾದ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಸಂಯೋಜನೆಯನ್ನು ಮಂಜೂರು ಮಾಡಿ ಹುದ್ದೆ ಮಂಜೂರಾಗದ ವಿಷಯಗಳಿಗೆ ಮಾತ್ರ ಅತಿಥಿ ಉಪನ್ಯಾಸಕರ ಸೇವೆಯನ್ನು ಉಪಯೋಗಿಸಿಕೊಳ್ಳತಕ್ಕದ್ದು.
* ಪ್ರತಿ ಅತಿಥಿ ಉಪನ್ಯಾಸಕರಿಗೆ ವಾರದಲ್ಲಿ ಗರಿಷ್ಠ 10 ಗಂಟೆಗಳ ಕಾರ್ಯಭಾರವನ್ನು ಮಾತ್ರ ನಿರ್ವಹಿಸಲು ಅನುಮತಿ ನೀಡಬಹುದು. ಯಾವುದೇ ಕಾಲೇಜಿನಲ್ಲಿ ಪ್ರತಿ ವಿಷಯದಲ್ಲಿ ವಾರದಲ್ಲಿ 10/12 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರವಿದ್ದಲ್ಲಿ ಇಬ್ಬರು ಅತಿಥಿ ಉಪನ್ಯಾಸಕರನ್ನು ಉಪಯೋಗಿಸಿಕೊಳ್ಳಬಹುದು.
* ಈ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂ ಉಪನ್ಯಾಸಕರ ನೇಮಕಾತಿ ಆಗುವವರೆಗೆ ಅಥವಾ 2024-25ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಬಳಸಿಕೊಳ್ಳತಕ್ಕದ್ದು. ಸರ್ಕಾರದ ನಿಯಮಗಳಲ್ಲಿ ಈ ಅವಧಿಯಲ್ಲಿ ಖಾಯಂ ಉಪನ್ಯಾಸಕರು ನೇಮಕಾತಿ ಹೊಂದಿ ಕರ್ತವ್ಯಕ್ಕೆ ಹಾಜರಾದ ತಕ್ಷಣದಿಂದ ಅತಿಥಿ ಉಪನ್ಯಾಸಕರ ಕಾರ್ಯನಿರ್ವಹಣೆಯು ತಂತಾನೆ ರದ್ದಾಗುತ್ತದೆ.
* ಪ್ರಾಚಾರ್ಯರ ಬೋಧನಾ ವಿಷಯವೇ ಇರುವ ಹುದ್ದೆ ಖಾಲಿ ಇದ್ದಲ್ಲಿ, ಅಂತಹ ಹುದ್ದೆಯ ಕಾರ್ಯಭಾರವು ವಾರದಲ್ಲಿ 10 ಗಂಟೆಗೆ ಮೀರದಿದ್ದಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸುವಂತಿಲ್ಲ. ಆಯಾ ವಿಷಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಲು ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಮುಂದೆ ಬಂದಲ್ಲಿ ಅಂತಹವರ ಪೈಕಿ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚಿನ ಅಂಕ ಪಡೆದವರನ್ನು ಆಯಾ ಕಾಲೇಜಿನ ಪ್ರಾಚಾರ್ಯರು ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಇರುವ ಸಮಿತಿಯ ಮೂಲಕ ಆಯ್ಕೆ ಮಾಡತಕ್ಕದ್ದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications