ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರು; ಜ. 16ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

|
Google Oneindia Kannada News

ಮಂಗಳೂರು, ಜನವರಿ 15; ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜನವರಿ 16ರ ಸೋಮವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯಲಿದೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ ಭಾಷೆ ವಿಷಯಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ನೇರ ಸಂದರ್ಶನದ ಮೂಲಕ ನಡೆಸಲಾಗುತ್ತದೆ.

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ, ಬೆಂಗಳೂರಿನಲ್ಲಿ ಕೆಲಸ

Guest Lecturer Recruitment Walk In Interview At Mangalore University

ಇಂಗ್ಲೀಷ್ ಭಾಷೆಗೆ ಬೆಳಗ್ಗೆ 10.30 ರಿಂದ 11.30ರ ತನಕ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಬೆಳಗ್ಗೆ 11.30 ರಿಂದ 12.30ರ ತನಕ, ಸಂಖ್ಯಾ ಶಾಸ್ತ್ರಕ್ಕೆ ಮಧ್ಯಾಹ್ನ 12.30 ರಿಂದ 1.30ರ ತನಕ, ಕೊಡವ ಭಾಷೆಗೆ ಮಧ್ಯಾಹ್ನ 2.30 ರಿಂದ ಮಧ್ಯಾಹ್ನ 3 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.

ವಿಜಯನಗರ; ವಿವಿಧ ಹುದ್ದೆಗಳಿಗೆ ಜ.21ರ ತನಕ ಅರ್ಜಿ ಹಾಕಿ ವಿಜಯನಗರ; ವಿವಿಧ ಹುದ್ದೆಗಳಿಗೆ ಜ.21ರ ತನಕ ಅರ್ಜಿ ಹಾಕಿ

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ 55 ಅಂಕ ಹೊಂದಿದ್ದು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳು).

ಯುಜಿಸಿ, ಎನ್‍ಇಟಿ/ ಎಸ್‍ಎಲ್‍ಇಟಿ ಉತ್ತೀರ್ಣತೆ, ಎಂ.ಫಿಲ್/ ಪಿಎಚ್‍ಡಿ ಪದವಿ ಪ್ರಮಾಣಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯವು ಕಾಯ್ದಿರಿಸಿದೆ.

ಕೊಪ್ಪಳ; ಅಳವಂಡಿಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ ಕೊಪ್ಪಳ; ಅಳವಂಡಿಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಜರಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ; ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣ.

ಸಹಾಯಧನಕ್ಕಾಗಿ ಅರ್ಜಿ ಹಾಕಿ; 2022-23 ಸಾಲಿನ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳು ಸೇವಾಸಿಂದು ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ. ಫಲಾಪೇಕ್ಷಿಗಳು ಗ್ರಾಮ ಒನ್ ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್ ಚಾಲಿತ ಮತ್ತು ಅಲ್ಲದ ದ್ವಿ-ಚಕ್ರ/ ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಗರಿಷ್ಠ ರೂ. 50 ಸಾವಿರ ಸಹಾಯಧನ, ಉಳಿದ ಮೊತ್ತ ಸಾಲ.

ಆಸಕ್ತರು ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‍ಕಾರ್ಡ್, ಗುರುತಿನ ಚೀಟಿ, ಆಧಾರ್ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಡಿಎಲ್ (2 ವೀಲರ್) ಈ ದಾಖಲಾತಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಿ ಎರಡು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272-228857.

English summary
Walk In interview for guest lecturer recruitment at Mangalore university on January 16th. Candidates can attend from 10 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X