ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಆಯ್ಕೆ; ದಿನಾಂಕ, ವೇತನ, ವಿವರಗಳು
ಬೆಂಗಳೂರು, ಆಗಸ್ಟ್ 24: ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆ ಹೊರಡಿಸಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯನ್ನು 25/8/2023ರಿಂದ ಅರ್ಜಿ ಸಲ್ಲಿಕೆ ಮಾಡಬಹುದು.
ಅತಿಥಿ ಉಪನ್ಯಾಸಕರು (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿದಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಆಯ್ಕೆ ಪ್ರಕ್ರಿಯೆಯನ್ನು ಯಾವ ರೀತಿ ನಡೆಸಬೇಕು ಎಂದು ಕಾಲೇಜು & ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕರಣೆ ಹೊರಡಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 2/9/2023. ರಾಜ್ಯವ್ಯಾಪಿ ಮೆರಿಟ್ ಪಟ್ಟಿ 4/9/2023ರಂದು ಪ್ರಕಟವಾಗಲಿದೆ. ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸಿಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ದಿನಾಂಕ 8/9/2023. ಮೆರಿಟ್ ಪಟ್ಟಿಯನ್ನು ಕಾಲೇಜು ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕ 11/9/2023 ರಿಂದ 15/9/2023. ಕೌನ್ಸಿಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ 16/9/2023. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು dce.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಆಯ್ಕೆ ಪ್ರಕ್ರಿಯೆ ಮಾನದಂಡಗಳು, ವಿದ್ಯಾರ್ಹತೆ
* ಅಭ್ಯರ್ಥಿಯು 2 ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ 25 ಅನ್ನು ಗಣನೆಗೆ ತೆಗೆದುಕೊಳ್ಳುವುದು. (ಉದಾ: ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25ರಷ್ಟು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು). ಗರಿಷ್ಠ ಅಂಕಗಳು 25.
* ಹೆಚ್ಚುವರಿ ವಿದ್ಯಾರ್ಹತೆ. ಪಿಹೆಚ್‌ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12 ಅಂಕ, ಎನ್‌ಇಟಿ/ ಕೆ-ಸೆಟ್/ ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 9 ಅಂಕ, ಎಂ. ಫಿಲ್. ವಿದ್ಯಾರ್ಹತೆ ಪಡೆದಿದ್ದಲ್ಲಿ 6 ಅಂಕಗಳು.
* ಅನುಭವ. ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳು (ಪ್ರತಿ ಶೈಕ್ಷಣಿಕ ವರ್ಷದ ಪೂರ್ಣ ಅವಧಿ ಸೇವೆಗೆ 3 ಅಂಕಗಳು, ಶೈಕ್ಷಣಿಕ ವರ್ಷದಲ್ಲಿ 1 ಸೆಮಿಸ್ಟರ್ ನಲ್ಲಿ ಮಾತ್ರ ಸೇವೆ ಸಲ್ಲಿಸಿದರೆ 1.5 ಅಂಕಗಳು, ಸೆಮಿಸ್ಟರ್ ನ1 ತಿಂಗಳ ಸೇವಾ ಅವಧಿಗೆ 0.5 ಅಂಕ, 1 ತಿಂಗಳು ಮೇಲ್ಪಟ್ಟು, 2 ತಿಂಗಳವರೆಗಿನ ಸೇವಾ ಅವಧಿಗೆ 1 ಅಂಕ ಹಾಗೂ 2 ತಿಂಗಳು ಮೇಲ್ಪಟ್ಟ ಸೇವಾ ಅವಧಿಗೆ 1.5 ಅಂಕಗಳು). ವಿಕಲಚೇತನ ಅಭ್ಯರ್ಥಿಗಳಿಗೆ 10 ಅಂಕಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು ಪ್ರಕಟಣೆ ಹೇಳಿದೆ.
ಈ ಮಾನದಂಡಗಳನ್ನು ಅನುಸರಿಸಿ, ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ರಾಜ್ಯವ್ಯಾಪಿ ಮೆರಿಟ್ ಪಟ್ಟಿ (State-wise Merit List) ಅನ್ನು ಪ್ರಕಟಿಸಲಾಗುವುದು.
* ರಾಜ್ಯವ್ಯಾಪಿ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಲ್ಲಿ ವಿಷಯವಾರು ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಅರ್ಹ ಅಭ್ಯರ್ಥಿಗಳ ರಾಜ್ಯವ್ಯಾಪಿ ಆಯ್ಕೆಪಟ್ಟಿ (State-wise Selection List) ಅನ್ನು ಪ್ರಕಟಿಸಲಾಗುವುದು ಹಾಗೂ ರಾಜ್ಯವ್ಯಾಪಿ ಆಯ್ಕೆಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.
ಗೌರವ ಧನದ ವಿವರಗಳು
* ಆಯ್ಕೆಯಾಗುವ ಅತಿಥಿ ಉಪನ್ಯಾಸಕರಿಗೆ ನಿಗದಿಪಡಿಸಿರುವ ಗೌರವಧನವನ್ನು ನಿಯಮಾನುಸಾರ ನಿರ್ವಹಿಸುವ ಕಾರ್ಯಭಾರಕ್ಕೆ ಹಾಗೂ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿರುವ ಅರ್ಹತೆಗೆ (ವಿದ್ಯಾರ್ಹತೆ/ ಸೇವಾ ಅವಧಿ) ಅನುಗುಣವಾಗಿ ಪರಿಗಣಿಸಲಾಗುವುದು.
5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ. 32,000. 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ. 30,000. 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 28,000. 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ನಿಗದಿ ಮಾಡಲಾಗಿದೆ.
* ಆಯ್ಕೆಯಾಗುವ ಅತಿಥಿ ಉಪನ್ಯಾಸಕರಿಗೆ ಕಲಾ/ ವಾಣಿಜ್ಯ/ ಭಾಷಾ ವಿಷಯಗಳಿಗೆ ಗರಿಷ್ಠ 15 ಗಂಟೆಗಳ ಹಾಗೂ ವಿಜ್ಞಾನ ವಿಷಯಗಳು/ ಪ್ರಾಯೋಗಿಕ ತರಗತಿಗಳಿರುವ ವಿಷಯಗಳಿಗೆ ಗರಿಷ್ಠ 19 ಗಂಟೆಗಳ ಕಾರ್ಯಭಾರವನ್ನು ಮಾತ್ರ ಹಂಚಿಕೆ ಮಾಡಲಾಗುವುದು ಹಾಗೂ 15/19 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಲಭ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನವನ್ನು ಪರಿಗಣಿಸಲಾಗುವುದು.
* ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಗ್ರಂಥಪಾಲಕರ ಹುದ್ದೆಗಳು ಖಾಲಿ ಇರುವ ಕಾಲೇಜುಗಳಲ್ಲಿ ಅತಿಥಿ ದೈಹಿಕ ಶಿಕ್ಷಣ ಹಾಗೂ ಅತಿಥಿ ಗ್ರಂಥಪಾಲಕರ ಸೇವೆಯನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಅವರಿಗೆ 19 ಗಂಟೆಗಳ ಕಾರ್ಯಭಾರವನ್ನು ನಿಗದಿಗೊಳಿಸಿ ಆಯ್ಕೆ ಮಾಡಲಾಗುತ್ತದೆ.
* ಅಭ್ಯರ್ಥಿಗಳು ಸೇವಾ ಅವಧಿಯ ವಿವರಗಳನ್ನು ಪ್ರಾಂಶುಪಾಲರಿಂದ ಈ ಪತ್ರಕ್ಕೆ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ ಪಡೆದು ಸದರಿ ಸೇವಾ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ಯಥಾವತ್ತಗಿ ನಮೂದಿಸುವುದು.
* ಸದರಿ ನಮೂನೆಯಲ್ಲಿ ಈಗಾಗಲೇ ಈ ಹಿಂದಿನ ವರ್ಷಗಳ ಸೇವಾ ವಿವರಗಳನ್ನು ಪ್ರಾಂಶುಪಾಲರಿಂದ ಪಡೆದಿದ್ದಲ್ಲಿ ಪುಸಕ್ತ ಸಾಲಿನ ಅಂದರೆ 2022-23ನೇ ಸಾಲಿನ ಸೇವಾ ವಿವರಗಳನ್ನು ಮಾತ್ರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ಪಡೆದು, ಒಟ್ಟು ಸೇವಾ ವಿವರಗಳನ್ನು ಅರ್ಜಿಯಲ್ಲಿ ನಮೂದಿಸುವುದು.
* ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಸೇವೆಯನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು.
* ಕೌನ್ಸಿಲಿಂಗ್ ಮೂಲಕ ಕಾಲೇಜು ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯಾದ ನಂತರ 2 ದಿನಗಳೊಳಾಗಿ ಸಂಬಂಧಪಟ್ಟ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
* ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸಿರುವ ವಿವರಗಳಂತೆ, ಅವರ ವಿದ್ಯಾರ್ಹತೆ ಮತ್ತು ಸೇವಾ ವಿವರದ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮ ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ.
* ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ವಿದ್ಯಾರ್ಹತೆ, ಸೇವಾ ವಿವರಗಳು ಹಾಗೂ ಇನ್ನಿತರೆ ಅಗತ್ಯ ಮಾಹಿತಿಗಳನ್ನು ನಮೂದಿಸುವಾಗ ತಪ್ಪಾಗದಂತೆ ಗಮನಹರಿಸಿ ಸರಿಯಾದ/ ನಿಖರ ಮಾಹಿತಿಯನ್ನು ದಾಖಲಿಸುವುದು.
* ಕಣ್‌ತಪ್ಪಿನಿಂದಾಗಿ ತಪ್ಪಾದ ಮಾಹಿತಿಯನ್ನು ನಮೂದಿಸಿರುವುದು ಕಂಡುಬಂದಲ್ಲಿ ಕೂಡಲೇ ಗಮನಹರಿಸಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಸರಿಪಡಿಸಿಕೊಳ್ಳಲು (edit) ಸಹ ಅವಕಾಶವಿರುತ್ತದೆ. ಒಂದು ವೇಳೆ ಕೊನೆಯ ದಿನಾಂಕದ ನಂತರ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಮನವಿ/ ಕೋರಿಕೆ ಸಲ್ಲಿಸಿದಲ್ಲಿ ಅಂತಹ ಯಾವುದೇ ಕೋರಿಕೆ/ ಮನವಿಗಳನ್ನು ಪರಿಗಣಿಸುವುದಿಲ್ಲ.
* ಅಭ್ಯರ್ಥಿಗಳು ಒಂದು ವೇಳೆ ವಿದ್ಯಾರ್ಹತೆ, ಸೇವಾ ವಿವರಗಳು ಹಾಗೂ ಇನ್ನಿತರೆ ಮಾಹಿತಿಗಳನ್ನು ತಪ್ಪಾಗಿ ನಮೂದಿಸಿದ್ದಲ್ಲಿ, ಮುಂದಿನ ಪರಿಣಾಮಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ನೇರ ಹೊಣೆಗಾರರಾಗಿರುತ್ತಾರೆ ಹಾಗೂ ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಿ, ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
* 2023-24ನೇ ಶೈಕ್ಷಣಿಕ ಸಾಲಿನಲ್ಲಿ ಆಯ್ಕೆಯಾಗುವ/ ಕರ್ತವ್ಯ ನಿರ್ವಹಿಸುವ ಅತಿಥಿ ಉಪನ್ಯಾಸಕರನ್ನು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಂತೆ 2023-24ನೇ ಶೈಕ್ಷಣಿಕ ಸಾಲಿನ ಮುಕ್ತಾಯದವರೆಗೆ (ಬೋಧನಾ ಕಾರ್ಯಭಾರದ ಲಭ್ಯತೆಗನುಸಾರವಾಗಿ) ಅಥವಾ 10 ತಿಂಗಳಿಗೆ ಮಾತ್ರ, ಇದರಲ್ಲಿ ಯಾವುದೂ ಮೊದಲು ಅಲ್ಲಿಯವರೆಗೆ ಮುಂದುವರೆಸಿ, ನಂತರ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುವುದು.
* ಕೌನ್ಸಿಲಿಂಗ್ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಆಯಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದಲ್ಲಿ ಅವರ ಬದಲಿಗೆ ನಂತರದ ಅಭ್ಯರ್ಥಿಯನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿ ಆಯ್ಕೆಪಟ್ಟಿಯನ್ನು ಸಂಬಂಧಪಟ್ಟ ಕಾಲೇಜಿಗೆ ರವಾನಿಸಲಾಗುವುದು.
* ನಿಗದಿತ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸದ ಅಥವಾ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಕಾಲೇಜು ಆಯ್ಕೆ ಮಾಡಿಕೊಳ್ಳದ ಹಾಗೂ ಕೌನ್ಸಿಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡು ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳಿಗೆ ಪುನಃ 2ನೇ ಬಾರಿಗೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.
* ಆನ್‌ಲೈನ್ ಮೂಲಕ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕುರಿತು ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳ ನೋಟೀಸ್ ಬೋರ್ಡ್‌ನಲ್ಲಿ ಪಕಟಿಸುವುದರೊಂದಿಗೆ, ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾಹಿತಿಯನ್ನು ನೀಡುವುದು.
* ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ರಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಸದರಿ ವೆಬ್‌ಸೈಟ್ ಅನ್ನು ಪ್ರತಿನಿತ್ಯ ಗಮನಿಸಬೇಕಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications