ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿಥಿ ಉಪನ್ಯಾಸಕರ ನೇಮಕ: 27ರಿಂದ ಆನ್‌ಲೈನ್ ಕೌನ್ಸೆಲಿಂಗ್

|
Google Oneindia Kannada News

ಬೆಂಗಳೂರು, ಜನವರಿ 26: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಜ.27ರಿಂದ (ಗುರುವಾರ) 30ರವರೆಗೆ ನಾಲ್ಕು ದಿನಗಳ ಕಾಲ ಆನ್‌ಲೈನ್ ಕೌನ್ಸೆಲಿಂಗ್ ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಜೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸೆಲಿಂಗ್‌ನಲ್ಲಿ ಆಯ್ಕೆ ‌ಮಾಡಿಕೊಳ್ಳಬಹುದು. ಬಳಿಕ ತಮ್ಮ ಕಚೇರಿಯಿಂದ ನೇಮಕಾತಿ ಆದೇಶ ನೀಡಲಾಗುತ್ತದೆ. ಅದರ ನಂತರದ ಎರಡು ದಿನಗಳಲ್ಲಿ ತಮಗೆ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕಾಗುತ್ತದೆ. ಆ ಸಂದರ್ಭದಲ್ಲಿ ಅವರು ಮೂಲ ದಾಖಲೆಗಳನ್ನು ಪರಿಶೀಲನೆಗೆ ಒಪ್ಪಿಸಿ, ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹವರನ್ನು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.

Guest Lecturers recruitment: Online counselling starts from Jan 27

'ಒಟ್ಟು 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು,' ಎಂದು ಅವರು ತಿಳಿಸಿದರು.

ಈ ಹುದ್ದೆಗಳಲ್ಲಿ ವಾಣಿಜ್ಯ ವಿಷಯವು 1,830, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಜೆನೆಸ್ ಮ್ಯಾನೇಜ್ಮೆಂಟ್ 490, ಕಂಪ್ಯೂಟರ್ ಸೈನ್ಸ್ 910, ಭೌತಶಾಸ್ತ್ರ 562, ರಾಜ್ಯಶಾಸ್ತ್ರ 602, ರಸಾಯನಶಾಸ್ತ್ರ 663, ಗಣಿತ 492, ಪ್ರಾಣಿಶಾಸ್ತ್ರ 198, ಸಸ್ಯಶಾಸ್ತ್ರ 212, ಮನೋವಿಜ್ಞಾನ 54, ಪರಿಸರ ವಿಜ್ಞಾನ 53, ಸಮಾಜಕಾರ್ಯ 80 ಮತ್ತು ಉರ್ದು 78 ಹುದ್ದೆಗಳನ್ನು ಹೊಂದಿವೆ ಎಂದು ಪ್ರದೀಪ್ ಮಾಹಿತಿ ನೀಡಿದ್ದಾರೆ.

ಅತಿಥಿ ಉಪನ್ಯಾಸಕ ಹುದ್ದೆ: ಮೂರು ದಿನಗಳಲ್ಲಿ 30,000ಕ್ಕೂ ಹೆಚ್ಚು ಅರ್ಜಿಅತಿಥಿ ಉಪನ್ಯಾಸಕ ಹುದ್ದೆ: ಮೂರು ದಿನಗಳಲ್ಲಿ 30,000ಕ್ಕೂ ಹೆಚ್ಚು ಅರ್ಜಿ

ಆದ್ಯತೆ: ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿರುವವರನ್ನು ಜ್ಯೇಷ್ಠತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಕೌನ್ಸೆಲಿಂಗ್ ಬಳಿಕ ಎಲ್ಲರೂ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇಲ್ಲಿ ತನಕ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ 1,3 ಹಾಗೂ 5ನೇ ಸೆಮಿಸ್ಟರ್‌ ಅವಧಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅವಶ್ಯವಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಹಿಂದೆ ಆಯಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರಿಂದ ಕಾಲೇಜಿನ ಹಂತದಲ್ಲಿ ಅರ್ಜಿಯನ್ನು ಪಡೆದು, ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ವಿಷಯಗಳ ವಿಭಾಗದ ಮುಖ್ಯಸ್ಥರು, ಹಿರಿಯ ಅಧ್ಯಾಪಕರು ಹಾಗೂ ಆಡಳಿತ ವಿಭಾಗದ ಅಧಿಕಾರಿ/ಸಿಬ್ಬಂದಿ ವರ್ಗದವರನ್ನೊಳಗೊಂಡ ಆಯ್ಕೆ ಸಮಿತಿಯು ಪರಿಶೀಲಿಸಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.

ರಾಜ್ಯ ಸರಕಾರವು ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ' ಎಂದಿದ್ದಾರೆ.

ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿರುವವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಅಲ್ಲದೆ, ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ, ನಾನಾ ಮಾನದಂಡಗಳ ಅನ್ವಯ ರಾಜ್ಯವ್ಯಾಪ್ತಿಯ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

English summary
Guest Lecturers recruitment: Online applications for the appointment of guest lecturers of government first-grade colleges for the academic year 2021-22 invited and Online counselling starts from Jan 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X