ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ; ಸ್ಥಳ, ವಿವರಗಳು
ಬೆಂಗಳೂರು, ನವೆಂಬರ್ 26; ಅತಿಥಿ ಶಿಕ್ಷಕ, ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಕೊಡಗು, ಕೊಪ್ಪಳದಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು, ಅರ್ಹರು ಪಾಲ್ಗೊಳ್ಳಬಹುದು.
ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತದೆ.

ನೇರ ಸಂದರ್ಶನವು ನವೆಂಬರ್ 28ರಂದು ಬೆಳಗ್ಗೆ 10.30 ಗಂಟೆಗೆ ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯಲಿದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ https://navodaya.gov.in/nvs/nvs-school/KODAGU/en/home/ ವೆಬ್‌ಸೈಟ್ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 8921089811, 6361148504.
ಕೊಪ್ಪಳದಲ್ಲಿ ನೇರ ಸಂದರ್ಶನ; ಕೊಪ್ಪಳದಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗೆ ನೇರ ಸಂದರ್ಶನವನ್ನು ನವೆಂಬರ್ 27ರ ಸೋಮವಾರದಿಂದ ನವೆಂಬರ್ 29ರ ಬುಧವಾರದವರೆಗೆ ಆಯೋಜನೆ ಮಾಡಲಾಗಿದೆ.
ಆಸಕ್ತರು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪ್ರೆಂಟಿಸ್ ತರಬೇತಿಗೆ ಅರ್ಜಿ; ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 8 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಹಾಕಿ; 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು, ಅರ್ಜಿ ಸಲ್ಲಿಸಲು ಡಿಸೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆಗಳು 08272-298379, 9482194105.












Click it and Unblock the Notifications