ಕೊಪ್ಪಳ; ಕೆಲಸ ಖಾಲಿ ಇದೆ, ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ, ಡಿಸೆಂಬರ್ 08; ಕೊಪ್ಪಳದಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನವಾಗಿದೆ.

ಹಿರೇಸಿಂದೋಗಿಯ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಇ. ಪಠ್ಯಕ್ರಮ)ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಹಿಂದಿ, ಗಣಿತ, ಸಮಾಜ ವಿಜ್ಞಾನ ಮತ್ತು ಗಣಕಯಂತ್ರ ವಿಜ್ಞಾನ ವಿಷಯಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

Guest Teacher Recruitment At Koppal Apply Till December 12

ವಸತಿ ಶಾಲೆಯು 6 ರಿಂದ 12ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿದೆ. ಹಿಂದಿ ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ ಎಂ.ಎ ಬಿ.ಇಡಿ, ಗಣಿತ ವಿಷಯದಲ್ಲಿ ಎಂ.ಎಸ್‌ಸಿ ಬಿ.ಇಡಿ, ಗಣಕಯಂತ್ರ ವಿಜ್ಞಾನ ವಿಷಯದಲ್ಲಿ ಎಂ.ಟೆಕ್ ಮತ್ತು ಎಂ.ಸಿ.ಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಹಿರೇಸಿಂದೋಗಿ, ಜಿಲ್ಲೆ ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೊಡ್ಡಪ್ಪ ವಾಲ್ಮೀಕಿ, ಪ್ರಾಂಶುಪಾಲರು 8747092789, 6362595974 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಎಸ್.ಎಸ್.ಎಲ್.ಸಿ.ಯಲ್ಲಿ ಶೇ.70, ಐಟಿಐ (ಸಿಟಿಎಸ್) ಶೇ 30 ಅಂಕ ಪಡೆದ ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಕಾರ್ಪೆಂಟರ್, ಟೂಲ್ & ಡೈ ಮೇಕರ್, ಮೆಕಾನಿಕ್ ಅರ್&ಎಸಿ ಅಡ್ವಾನಸ್ಡ್ ಸಿಎನ್‍ಸಿ ಮಷನಿಂಗ್, ಕ್ರಾಫ್ಟ್‌ಮನ್‌ ಟ್ರೈನಿಂಗ್ ಸ್ಕೀಮ್ ಸಿಟಿಎಸ್ ಇವುಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ದಿನಾಂಕ 30/12/2023 ಕೊನೆಯ ದಿನವಾಗಿರುತ್ತದೆ. ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್‍ಮೆಂಟ್ ಕಾರ್ಡ್, ಪಾಸ್‍ಪೋರ್ಟ್ ಸೈಜಿನ 4 ಪೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಕೆ ಮಾಡಬೇಕು.

ಅರ್ಜಿಗಳನ್ನು ನೇರವಾಗಿ ತಾಂತ್ರಿಕ ತರಬೇತಿ ಸಂಸ್ಥೆ, ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ., ಸುರಂಜನ್ ದಾಸ್ ರಸ್ತೆ, ವಿಮಾನಪುರ ಅಂಚೆ, ಬೆಂಗಳೂರು-560017 ವಿಳಾಸಕ್ಕೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 08182-255293, 9482023412.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+