Guest Teacher Recruitment: ಶಿವಮೊಗ್ಗ ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಜೂನ್ 02: ಶಿವಮೊಗ್ಗ ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 5ರ ತನಕ ಅರ್ಜಿ ಸಲ್ಲಿಕೆ ಮಾಡಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ಸರ್ಕಾರದಿಂದ 16,650 ರೂ. ನಿಗದಿಯಾಗಿರುತ್ತದೆ.
2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರ ನೇಮಕಾತಿ ನಡೆಯುತ್ತಿದೆ.

ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಶ್ರೀ ನಾರಾಯಣ ಗುರು/ ಅಟಲ್ ಬಿಹಾರಿ ವಾಜಪೇಯಿ/ ಶ್ರೀಮತಿ ಇಂದಿರಾ ಗಾಂಧಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂನ್ 5ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ರೂ.16,650 ನಿಗದಿಯಾಗಿರುತ್ತದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಶ್ರೀ ನಾರಾಯಣ ಗುರು/ ಅಟಲ್ ಬಿಹಾರಿ ವಾಜಪೇಯಿ/ ಶ್ರೀಮತಿ ಇಂದಿರಾ ಗಾಂಧಿ/ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಗಳನ್ನು ಕಚೇರಿ ವೇಳೆ ಸಂಪರ್ಕಿಸಬಹುದು.
ನೋಡಲ್ ಅಧಿಕಾರಿ ಹುದ್ದೆಗೆ ಅರ್ಜಿ ಹಾಕಿ; ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಜಿಲ್ಲಾ ನಗರಾಭಿವೃದ್ದಿ ಕೋಶದಲ್ಲಿ ಖಾಲಿ ಇರುವ ಒಂದು ನೋಡಲ್ ಅಧಿಕಾರಿ ಹುದ್ದೆಗೆ ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾತ್ತದೆ.
ಈ ನೇಮಕಾತಿ ತಾತ್ಕಾಲಿಕವಾಗಿದ್ದು 12 ತಿಂಗಳ ಅವಧಿಗೆ ಸೀಮಿತವಾಗಿರುತ್ತದೆ. ಹೊರಗುತ್ತಿಗೆ ಮೂಲಕ ಮಾತ್ರ ಈ ಸೇವೆ ಪಡೆದುಕೊಳ್ಳಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಬಿ.ಇ (ಸಿ.ಎಸ್/ ಐ.ಟಿ) ಅಥವಾ ಎಂ.ಸಿ.ಎ ವಿದ್ಯಾರ್ಹತೆ ಹೊಂದಿರಬೇಕು ಎಂದು ಪ್ರಕಟಣೆ ಹೇಳಿದೆ.
ಸಂದರ್ಶನ ಜೂನ್ 7ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಜಿಲ್ಲಾ ನಗರಾಭಿವೃದ್ದಿ ಕೋಶದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಕಚೇರಿ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ಹೇಳಿದೆ.












Click it and Unblock the Notifications