ಸರ್ಕಾರಿ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರ ನೇಮಕ: ವೇತನ ಎಷ್ಟು?

ಬೆಂಗಳೂರು, ಜೂನ್ 05; ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಈ ಕುರಿತು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದಾರೆ. ಈ ಆದೇಶ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೂಳ್ಳುವ ಕುರಿತು ಎಂಬ ವಿಷಯ ಒಳಗೊಂಡಿದೆ.

Guest Teacher Recruitment For Government Primary School Salary Details

ಆದೇಶದಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು, ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿ.ಎಸ್.ಟಿ ಮತ್ತು ಜಿ.ಪಿ.ಟಿ) ಒಟ್ಟು 33,863. ಹುದ್ದೆಗಳಿಗೆ ಎದುರಾಗಿ ಮೊದಲ ಹಂತದಲ್ಲಿ ಸದರಿ 33,863 ಖಾಲಿ ಹುದ್ದೆಗಳಿಗೆ ಜಿಲ್ಲಾವಾರು/ ತಾಲ್ಲೂಕುವಾರು ಅಥಿತಿ ಶಿಕ್ಷಕರನ್ನು ಷರತ್ತುಗಳಿಗೊಳಪಟ್ಟು ನೇಮಕ ಮಾಡಿಕೊಳ್ಳಬೇಕಿದೆ.

ಷರತ್ತುಗಳು

* ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದು. ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿ ಸಂಬಂಧಪಟ್ಟ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.

* ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ/ ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.

* ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿ ವಿಶೇಷವಾಗಿ ಪ್ರಾರಂಭಿಸಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ ಬೆಂಗಳೂರು ಪಬ್ಲಿಕ್ ಶಾಲೆಗಳು/ ದ್ವಿಭಾಪಾ (Bilingual) (ಆಂಗ್ಲಭಾಷಾ) ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು.

* ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು. ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡುವುದು.

* ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಸಿಕ ರೂ. 10,000 ಆಗಿರುತ್ತದೆ. ಅಥಿತಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗಳಿಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ, ಸದರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂತಹ ಅಥಿತಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ತದನಂತರ ತಾಲ್ಲೂಕಿನಲ್ಲಿ ಅಗತ್ಯಾನುಸಾರ ವರ್ಗಾವಣೆಯಿಂದ ಅಥವಾ ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು/ ಹುದ್ದೆಯನ್ನು ಸ್ಥಳೀಯವಾಗಿ ಹಂಚಿಕೆ ಮಾಡಿ ಕ್ರಮವಹಿಸುವುದು.

* ಪ್ರಸ್ತುತ ವರ್ಗಾವಣೆ ತಂತ್ರಾಂಶದಲ್ಲಿ ಇದ್ದಂತೆ ಖಾಲಿ ಹುದ್ದೆಗಳ ಅನುಸಾರ ತಾಲ್ಲೂಕುವಾರು ಅಥಿತಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಥಿತಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿವರ ಕಛೇರಿಗೆ ಸಲ್ಲಿಸಿದ ನಂತರ ತಾಲ್ಲೂಕಿನಿಂದ ತಾಲ್ಲೂಕಿಗೆ (ಜಿಲ್ಲೆಯ ಒಳಗೆ) ಅಥಿತಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+