ಹಾಸನ : ಅತಿಥಿ ಶಿಕ್ಷಕರ ನೇಮಕ ಅರ್ಜಿ ಆಹ್ವಾನ

ಹಾಸನ, ಮೇ 05 : ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಮೇ 13 ಕೊನೆಯ ದಿನವಾಗಿದೆ.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಲುವಾಗಿಲು ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ವಿಜ್ಞಾನ ಮತ್ತು ಗಣಿತ, ಹಿಂದಿ ವಿಷಯಕ್ಕೆ ಶಿಕ್ಷಕರು ಬೇಕಾಗಿದ್ದಾರೆ.

ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಹಾಸನ, ಅರಸೀಕೆರೆ, ಇಲ್ಲಿಗೆ ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ವಿಜ್ಞಾನ ಶಿಕ್ಷಕರು, ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಚನ್ನರಾಯಪಟ್ಟಣ ಇಲ್ಲಿಗೆ ಹಿಂದಿ ಶಿಕ್ಷಕರ ನೇಮಕಾತಿ ನಡೆಯುತ್ತಿದೆ.

jobs

ಆಸಕ್ತರು ಶೈಕ್ಷಣಿಕ ಅಗತ್ಯ ದಾಖಲಾತಿಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ್ ಭವನ್, ಶ್ರೀ ವಿದ್ಯಾಗಣಪತಿ ಅಡ್ಡ ರಸ್ತೆ ಆಕಾಶ ವಾಣಿ ಹಿಂಭಾಗ, ಹಾಸನ ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಯು ಭಾರತದ ಪ್ರಜೆಯಾಗಿದ್ದು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಅಭ್ಯರ್ಥಿಗಳು ಸಂಬಂಧ ಪಟ್ಟ ವಿಷಯಗಳಲ್ಲಿ ಬಿ.ಎಡ್ ನಲ್ಲಿ ಉತ್ತೀರ್ಣರಾಗಿರಬೇಕು.

ಈ ಸೇವೆಯನ್ನು ತಾತ್ಕಾಲಿಕವಾಗಿ ಪಡೆಯಲಾಗುವುದು. ಸದರಿಯವರ ಸೇವೆ ಖಾಯಂ ನೇಮಕಾತಿ ಅಥವಾ ಯಾವುದೇ ತರಹದ ಸೇವಾ ಕೃಪಾಂಕಕ್ಕೆ ಅರ್ಹರಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ/ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಡ್ಡ ರಸ್ತೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ ಇಲ್ಲಿಗೆ ಸಂಪರ್ಕ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+