ಕೊಪ್ಪಳ : ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಹಾಕಿ
ಕೊಪ್ಪಳ, ಜೂನ್ 04 : ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 7 ಅರ್ಜಿ ಸಲ್ಲಿಸಲು ಕೊನೆ ದಿನ.
ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಕನ್ನಡ, ವಿಜ್ಞಾನ ವಿಷಯದಲ್ಲಿ (ಸಿಬಿಝಡ್) ಮತ್ತು ದೈಹಿಕ ಶಿಕ್ಷಣ ವಿಷಯಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಶಿಕ್ಷಕರ ಅರ್ಹತೆ ಬಿಎ, ಬಿ.ಎಡ್, ಬಿಎಸ್ಸಿ, ಬಿ.ಎಡ್, ಬಿಎ ಬಿಪಿಎಡ್ ಹೊಂದಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅಥವಾ ಬೇರೆಡೆ ಅನುಭವ ಹೊಂದಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ತಾತ್ಕಾಲಿಕ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುವುದು.

ಹುದ್ದೆಗಳ ವಿವರ : 1 ಹುದ್ದೆ ಕನ್ನಡ ಭಾಷೆ, ವಿಜ್ಞಾನ, ದೈಹಿಕ ಶಿಕ್ಷಣ. ಶೈಕ್ಷಣಿಕ ಅರ್ಹತೆ ಅಂಕಪಟ್ಟಿಗಳೊಂದಿಗೆ ಮತ್ತು ಅನುಭವ ಹೊಂದಿದ್ದಲ್ಲಿ ಸಂಬಂಧಿಸಿದ ಸೇವಾ, ಅನುಭವ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ಸ್ಥಳ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಅರ್ಜಿ ಸಲ್ಲಿಸಲು ಜೂನ್ 7 ರಂದು ಕೊನೆಯವಾಗಿದೆ.
ಈ ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಮೇಲ್ಕಂಡ ಸ್ಥಳಕ್ಕೆ ಶೈಕ್ಷಣಿಕ ಅರ್ಹತೆ ಅಂಕಪಟ್ಟಿಗಳೊಂದಿಗೆ ಬಯೋ ಡೇಟಾ ಕಛೇರಿಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.












Click it and Unblock the Notifications