ಚಿತ್ರದುರ್ಗ: ಅತಿಥಿ ಶಿಕ್ಷಕರ ನೇಮಕಾತಿ, ನೇರ ಸಂದರ್ಶನ
ಚಿತ್ರದುರ್ಗ, ಮಾರ್ಚ್ 02: ಚಿತ್ರದುರ್ಗದಲ್ಲಿ ಶಿಕ್ಷಕರ ನೇಮಕಾತಿಯ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಒಂದು ವರ್ಷದ ಅವಧಿಗೆ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನ ಆಯೋಜಿಸಲಾಗಿದೆ. ಮಾರ್ಚ್ 8ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಇತರೆ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ.

ಇದಕ್ಕಾಗಿ ನೇರ ಸಂದರ್ಶನವನ್ನು ಮಾರ್ಚ್ 8ರಂದು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಪ್ರತಿ ವಿಷಯಕ್ಕೆ ಒಂದು ಹುದ್ದೆ ಮಾತ್ರ ಲಭ್ಯವಿರುತ್ತದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಸಿ, ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲಿಷ್, ಕನ್ನಡ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಸಂಗೀತ, ಕ್ರೀಡಾ ತರಬೇತುದಾರ (ಹೆಣ್ಣು), ಕಲೆ. ಸ್ನಾತಕೋತ್ತರ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲಿಷ್, ಭೌತಶಾಸ್ತ್ರ, ಕನ್ನಡ, ಗಣಿತ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ಕಂಪ್ಯೂಟರ್ ವಿಜ್ಞಾನ ವಿಷಯಗಳ ಶಿಕ್ಷಕರ ನೇಮಕಾತಿ ನಡೆಯುತ್ತಿದೆ.
ಅಲ್ಲದೇ ವಸತಿ ನಿಲಯ ಮೇಲ್ವಿಚಾರಕರು (ಮಹಿಳೆ) ಕೌನ್ಸಿಲರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಮೂಲ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಪ್ರಮಾಣ ಪತ್ರಗಳ ಒಂದು ಸೆಟ್ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಮತ್ತು ಒಂದು ಪಾಸ್‍ಪೋರ್ಟ್ ಭಾವಚಿತ್ರವನ್ನು ಮಾರ್ಚ್ 6ರಂದು ಅಥವಾ ಮೊದಲು ಸಲ್ಲಿಸಬೇಕು. ಅತಿಥಿ ಶಿಕ್ಷಕರಿಗೆ ಉಪನ್ಯಾಸ, ಅವಧಿ ಆಧಾರದಲ್ಲಿ ಗೌರವ ಧನ ಪಾವತಿಸಲಾಗುವುದು. ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೊಂದಣಿ ಮಾಡಿಕೊಳ್ಳಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗೆ 9744109555 ಅಥವಾ 7892898796 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು.
ಕೊಪ್ಪಳದಲ್ಲಿ ಕ್ಯಾಂಪಸ್ ಸಂದರ್ಶನ: ಅಪ್ರೆಂಟೀಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಮಾರ್ಚ್ 4ರಂದು ಬೆಳಗ್ಗೆ 10 ಗಂಟೆಗೆ ಕುಕನೂರಿನ (ಗುದ್ನೆಪ್ಪನ ಮಠ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಮೆ. ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್, ಬೇವಿನಹಳ್ಳಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳನ್ನು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 13,000 ರೂ.ಗಳ ಸ್ಟೈಫಂಡ್ ಇರುತ್ತದೆ. ಸಂದರ್ಶನದಲ್ಲಿ 18 ರಿಂದ 24 ವರ್ಷ ವಯೋಮಿತಿಯಲ್ಲಿರುವ ಐಟಿಐನ ಎಲೆಕ್ಟ್ರಿಷಿಯನ್, ಫಿಟ್ಟರ್, ವೆಲ್ಡರ್, ಟರ್ನರ್, ಡಿಸೆಲ್ ಮೆಕ್ಯಾನಿಕ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ವೃತ್ತಿಯಲ್ಲಿ ಉತ್ತೀರ್ಣರಾದ ಅಥವಾ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಭಾಗವಹಿಸಬಹುದು.
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಪ್ರಮಾಣ ಪತ್ರಗಳ ಮೂಲ ದಾಖಲಾತಿ ಹಾಗೂ 1 ಸೆಟ್ ಅಂಕಪಟ್ಟಿ ಜೆರಾಕ್ಸ್ ಪ್ರತಿಗಳು ಹಾಗೂ ಬಯೋಡೆಟಾದೊಂದಿಗೆ 2 ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಮತ್ತು ಪಾನ್ ಕಾರ್ಡ್ ಜೆರಾಕ್ಸ್ ಪ್ರತಿಗಳೊಂದಿಗೆ ಪಾಲ್ಗೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 9164198246, 8618952961, 9945789400 ಮತ್ತು 9964247098 ಸಂಖ್ಯೆಗೆ ಕರೆ ಮಾಡಿ.












Click it and Unblock the Notifications