ಗುಮುಲ್ ನೇಮಕಾತಿ; 37 ಹುದ್ದೆಗಳ ಭರ್ತಿಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 11 : ಗುಮುಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜನವರಿ 5, 2020 ಕೊನೆಯ ದಿನವಾಗಿದೆ.

ಬೀದರ್, ಕಲಬುರಗಿ, ಯಾದಗಿರಿ ಹಾಲು ಉತ್ಪಾದಕರ ಒಕ್ಕೂಟ (ಗುಮುಲ್) 37 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಕಲಬುರಗಿಯಲ್ಲಿ ಕೆಲಸ ಮಾಡಬೇಕಿದೆ.

ಮಾರುಕಟ್ಟೆ ಅಧೀಕ್ಷರು, ವಿಸ್ತರಾಧಿಕಾರಿ ದರ್ಜೆ -3, ಕಿರಿಯ ತಾಂತ್ರಿಕರು, ಮಾರುಕಟ್ಟೆ ಅಧಿಕಾರಿ ಮತ್ತು ಮಾರುಕಟ್ಟೆ ಅಧೀಕ್ಷಕರು, ಖರೀದಿ/ಉಗ್ರಾಣಾಧಿಕಾರಿ, ಹಿರಿಯ ಕೆಮಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

GUMUL Invited Applications For Various Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು, ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂಗಡದ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 52650-97100 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಎಸ್‌ಸಿ/ಎಸ್‌ಟಿ/ಪ್ರವರ್ಗ-1/ವಿಕಲ ಚೇತನರಿಗೆ 400 ರೂ., ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 800 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಡಿಸೆಂಬರ್ 6 ರಿಂದ ಜನವರಿ 6ರ ತನಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+