HAL Jobs: ₹87,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ, ವಿವರ

HAL Jobs: ಬೆಂಗಳೂರಿನಲ್ಲಿ ಹಲವು ಕಂಪನಿಗಳಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುತ್ತಿದ್ದಾರೆ. ಇದರ ನಡುವೆಯೂ ಕೆಲವೊಂದು ಕಂಪನಿಗಳು ಉದ್ಯೋಗಾಂಕ್ಷಿಗಳಿಗೆ ಉದ್ಯೋಗವಕಾಶಗಳನ್ನು ಒದಗಿಸುತ್ತಿವೆ. ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ಖಾಲಿಯಿರುವ 87,880 ರೂಪಾಯಿ ಮಾಸಿಕ ವೇತನದ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸುವುದೇಗೆ? ಎಷ್ಟು ಹುದ್ದೆಗಳು ಖಾಲಿಯಿವೆ & ಯಾವ್ಯಾವ ವಿಭಾಗಗಳಲ್ಲಿ ಎಂದು ಇಲ್ಲಿ ತಿಳಿಯಿರಿ.

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್‌ನಲ್ಲಿ ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು ಮೇ 13ರಂದು ಕೊನೆಯ ದಿನವಾಗಿದೆ. ಆಸಕ್ತರು ಆಫ್‌​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

HAL Jobs Application Invitation for 87 000 salary post know details

ಅಧಿಕೃತ ವೆಬ್‌ಸೈಟ್‌ hal-india.co.inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನು ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆಯ್ಕೆಯಾದವರಿಗೆ 87,880 ರೂಪಾಯಿ ಮಾಸಿಕ ವೇತನ ನೀಡಲಾಗುತ್ತದೆ. ಕೆಲಸದ ಸ್ಥಳ ಬೆಂಗಳೂರು ಆಗಿದೆ.

ಇನ್ನು ಅಭ್ಯರ್ಥಿಗಳಿಹೆ ಲಿಖಿತ ಪರೀಕ್ಷೆ, ಸಂದರ್ಶನ ಮಾಡಲಾಗುತ್ತದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ವ್ಯವಸ್ಥಾಪಕ (HR) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್‌, ಸುರಂಜನದಾಸ್ ರಸ್ತೆ, ವಿಮಾನಪುರ ಅಂಚೆ ಬೆಂಗಳೂರು-560017 ಇವರಿಗೆ ಕಳುಹಿಸಬೇಕಾಗುತ್ತದೆ.

ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 24ರಂದು ಆರಂಭವಾಗಿದ್ದು, ಕೊನೆಯ ದಿನಾಂಕ ಮೇ 13 ಆಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323005/22328082ಗೆ ಕರೆ ಮಾಡಬಹುದಾಗಿದೆ. ಅಥವಾ [email protected]ಗೆ ಮೇಲ್ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+