ಎಚ್ಎಎಲ್ ನಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 04 : ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್)ನಲ್ಲಿ ಖಾಲಿ ಇರುವ ವಿವಿಧ ಒಟ್ಟು 13 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
5 ನರ್ಸ್ ಹಾಗೂ 8 ಫಾರ್ಮಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಸೆಪ್ಟೆಂಬರ್ 14, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ ಎಲ್ಲಿ?: ಕರ್ನಾಟಕ
1. ನರ್ಸ್ ಹುದ್ದೆ (5)
* ವಿದ್ಯಾರ್ಹತೆ: ಪಿಯುಸಿ ಜತೆಗೆ ಡಿಪ್ಲಮೋನಲ್ಲಿ ನರ್ಸಿಂಗ್ ಪೂರ್ಣಗೊಳಿಸರಬೇಕು.
* ವೇತನ: 33039 ರು. ತಿಂಗಳಿಗೆ.
* ವಯೋಮತಿ: ಆಗಸ್ಟ್ 1,2017ಕ್ಕೆ ಅನ್ವಯವಾಗುಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 5, ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಮಾಡಲಾಗಿದೆ.
2. ಫಾರ್ಮಸಿ ಹುದ್ದೆ (8)
* ವಿದ್ಯಾರ್ಹತೆ: ಪಿಯುಸಿ ಜತೆಗೆ ಡಿಪ್ಲಮೋನಲ್ಲಿ ಫಾರ್ಮಸಿ ತೇರ್ಗಡೆಯಾಗಿರಬೇಕು.
* ವೇತನ: 33039 ರು. ತಿಂಗಳಿಗೆ.
* ವಯೋಮತಿ: ಆಗಸ್ಟ್ 1,2017ಕ್ಕೆ ಅನ್ವಯವಾಗುಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 5, ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಮಾಡಲಾಗಿದೆ.
ಆಯ್ಕೆ ವಿಧಾನ: ಸಂದರ್ಶನ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಎರಡು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

Click it and Unblock the Notifications