ಎಚ್‌ಎಎಲ್ ನೇಮಕಾತಿ : ಬೆಂಗಳೂರು, ತುಮಕೂರಿನಲ್ಲಿ ಕೆಲಸ
ಬೆಂಗಳೂರು, ನವೆಂಬರ್ 29 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ 13 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19/12/2018 ಕೊನೆಯ ದಿನವಾಗಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಏರ್ ಟ್ರಾಫಿಕ್ ಕಂಟ್ರೋಲರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಮತ್ತು ತುಮಕೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಪದವಿ/ಟೆಕ್ನಾಲಜಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್. ಯುಆರ್/ಓಬಿಸಿ ಅಭ್ಯರ್ಥಿಗಳು ಶೇ 60 ರಷ್ಟು ಅಂಕ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಶೇ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣಗೊಂಡಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 19 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿ : 30000 - 120000 ಪ್ರತಿ ತಿಂಗಳು.
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ. ಇತರ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸ್ಕಿಲ್ ಟೆಸ್ಟ್‌ಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications