ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಡಿಸೆಂಬರ್ 29 : ಹಾಸನ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19/1/2019 ಕೊನೆಯ ದಿನಾಂಕವಾಗಿದೆ.

ಶೀಘ್ರಲಿಪಿಗಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.

ಶೀಘ್ರಲಿಪಿಗಾರ 8, ಬೆರಳಚ್ಚುಗಾರ 16, ಬೆರಳಚ್ಚು-ನಕಲುಗಾರರು 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕಡ್ಡಾಯವಾಗಿ ಹಾಸನ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ ಮೂಲಕ ಸಲ್ಲಿಸಬೇಕಾಗಿದೆ.

Hassan District Court Recruitment 2019

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ-2ಎ, 2ಬಿ, 3ಎ, 3ಬಿ 38 ವರ್ಷಗಳು, ಪ.ಜಾ/ಪ.ಪಂ/ಪ್ರವರ್ಗ -1ಕ್ಕೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನದಂದು ಅಭ್ಯರ್ಥಿಗಳು ಗರಿಷ್ಠ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗ, ಪವರ್ಗ 2ಎ, 2ಬಿ, 3ಎ ಮತ್ತು 3ಬಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿ ಮಾಡಬೇಕು.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+