ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾಸನ, ಫೆಬ್ರವರಿ 07: ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ಹುದ್ದೆಗಳು ಲಭ್ಯವಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 05/03/2019 ಕೊನೆಯ ದಿನಾಂಕವಾಗಿದೆ.
ಸಂಸ್ಥೆ ಹೆಸರು: ಹಾಸನ ಜಿಲ್ಲಾ ನ್ಯಾಯಾಲಯ
ಒಟ್ಟು ಹುದ್ದೆ : ವಿವಿಧ ಹುದ್ದೆ
ಹುದ್ದೆ ಹೆಸರು: process server, peon
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 05, 2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಯಿಂದ 8ನೇ/10ನೇ ತರಗತಿ ತನಕ ವ್ಯಾಸಂಗ ಮಾಡಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ ಗರಿಷ್ಠ 35, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ 38, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಸಂಬಳ ನಿರೀಕ್ಷೆ: 19,950 ರಿಂದ 37,900 ರು
ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಮತ್ತು ಮಾಜಿ ಸೈನಿಕರು 200 ರೂ., ಪ.ಜಾ/ಪ.ಪಂ/ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕು.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನ್ಯಾಯಾಲಯದ ವೆಬ್‌ಸೈಟ್ ಮೂಲಕ ಆನ್ ಲೈನ್ ನಲ್ಲೇ ಭರಿಸಬಹುದು. ಅರ್ಜಿ ಸಲ್ಲಿಸುವವರು ಚಾಲ್ತಿಯಲ್ಲಿರುವ ತಮ್ಮ ದೂರವಾಣಿ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನೀಡಬೇಕು.
ನೇಮಕಾತಿ ಪ್ರಕ್ರಿಯೆ : ವಯಕ್ತಿಕ ಸಂದರ್ಶನ.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 05/03/2019 ಕೊನೆ ದಿನಾಂಕವಾಗಿದೆ.
ಅರ್ಜಿಗಳನ್ನು ಸಲ್ಲಿಸಲು, ನೇಮಕಾತಿ ಆದೇಶ ಓದಲು ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications