ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 31 ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಡಿಸೆಂಬರ್ 21 : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19/1/2019 ಕೊನೆಯ ದಿನವಾಗಿದೆ.

ಶೀಘ್ರಲಿಪಿಗಾರ 8, ಬೆರಳಚ್ಚುಗಾರರು 16, ಬೆರಳಚ್ಚು-ನಕಲುಗಾರರು 7 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವವರು ಚಾಲ್ತಿಯಲ್ಲಿರುವ ತಮ್ಮ ದೂರವಾಣಿ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನೀಡಬೇಕು.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ 38, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

Hassan District Court recruitment : Apply for 31 posts

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಮತ್ತು ಮಾಜಿ ಸೈನಿಕರು 200 ರೂ., ಪ.ಜಾ/ಪ.ಪಂ/ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನ್ಯಾಯಾಲಯದ ವೆಬ್‌ಸೈಟ್ ಮೂಲಕ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್‌ ಮೂಲಕ ಆನ್‌ಲೈನ್ ಪೇಮೆಂಟ್ ಮೂಲಕ ಪಾವತಿ ಮಾಡಬೇಕು.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19/1/2019ರ ರಾತ್ರಿ 11.59ರ ವರೆಗೆ ಅವಕಾಶವಿದೆ.

ಅರ್ಜಿಗಳನ್ನು ಸಲ್ಲಿಸಲು, ನೇಮಕಾತಿ ಆದೇಶ ಓದಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+