ಹಾಸನ ಗ್ರಾಮ ಲೆಕ್ಕಿಗರ ನೇಮಕಾತಿ, 61 ಹುದ್ದೆಗಳು ಖಾಲಿ

ಬೆಂಗಳೂರು, ನವೆಂಬರ್ 21 : ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ 2018ನೇ ಸಾಲಿನಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20, 2018 ಕೊನೆಯ ದಿನವಾಗಿದೆ.

ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆಯಿಂದಾಗಿ ತೆರವಾದ 61 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ನವೆಂಬರ್ 20 ರಿಂದ ಡಿಸೆಂಬರ್ 20, 2018ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬ್ಯಾಂಕ್‌ನಲ್ಲಿ ನಿಗದಿತ ಶುಲ್ಕ ಪಾವತಿ ಮಾಡಿ, ಚಲನ್ ಅಪ್‌ಲೋಡ್ ಮಾಡಲು 21/12/2018 ಕೊನೆಯ ದಿನವಾಗಿದೆ. ಡಿಸೆಂಬರ್ 20ರ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುವುದಿಲ್ಲ.

ಕರ್ನಾಟಕ ಜನರಲ್ ಸರ್ವೀಸಸ್ ತಿದ್ದುಪಡಿ ನಿಯಮಗಳು 2008 ಮತ್ತು ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಪ್ರಕಾರ ಅಭ್ಯರ್ಥಿಯು ಅವರ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆಯ ವಿವರ

ವಿದ್ಯಾರ್ಹತೆಯ ವಿವರ

ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮುಕ್ತ ವಿಶ್ವವಿದ್ಯಾಲಯಗಳಿಂದ ಪಡೆದಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಅಂಗೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಯೋಮಿತಿಗಳ ವಿವರ

ವಯೋಮಿತಿಗಳ ವಿವರ

ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 20/12/2018ಕ್ಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿ ವಿವರಗಳನ್ನು ಚಿತ್ರಗಳಲ್ಲಿ ನೋಡಿ.

ಅರ್ಜಿ ಶುಲ್ಕದ ವಿವರ

ಅರ್ಜಿ ಶುಲ್ಕದ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಿ ಚಲನ್ ಅಪ್‌ಲೋಡ್ ಮಾಡಬೇಕು. ಅರ್ಜಿ ಶುಲ್ಕ ಪಾವತಿ ಮಾಡಲು ಡಿಸೆಂಬರ್ 21 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿದೆ. ಅನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ವಿಳಾಸ ಇಲ್ಲಿದೆ. ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಆದೇಶವನ್ನು ಸರಿಯಾಗಿ ಓದಿಕೊಳ್ಳುವಂತೆ ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+