ಹಾಸನ; ಉದ್ಯೋಗ ಮೇಳ, ಅತಿಥಿ ಶಿಕ್ಷಕರ ನೇಮಕ
ಹಾಸನ, ಅಕ್ಟೋಬರ್ 27; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸನ ವ್ಯಾಪ್ತಿಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.
ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) ಹಾಸನ ಇಲ್ಲಿಗೆ ಅತಿಥಿ ಶಿಕ್ಷಕರಾಗಿ ಆಂಗ್ಲ ಮಾಧ್ಯಮದಲ್ಲಿ ಪಾಠ ಮಾಡಲು ಗಣಿತ ( ಬಿ. ಎಸ್. ಸಿ, ಬಿ.ಇ. ಡಿ, ಪಿ. ಸಿ.ಎಂ ) ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಭ್ಯರ್ಥಿಗಳು ಶೈಕ್ಷಣಿಕ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಅಕ್ಟೋಬರ್ 30ರೊಳಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಅರಳೆಪೇಟೆ, ಹಾಸನ ತಾಲ್ಲೂಕು ಇಲ್ಲಿಗೆ ಸಲ್ಲಿಕೆ ಮಾಡಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9008729704ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಿನಿ ಉದ್ಯೋಗ ಮೇಳ; ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 30ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸರಕಾರಿ ಐ.ಟಿ.ಐ ಕಾಲೇಜು ಆವರಣದಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಹಾಸನ, ಮೈಸೂರು, ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಿವೆ.
ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ/ ಪಿಯುಸಿ, ಯಾವುದೇ ಪದವಿ/ ಡಿಪ್ಲೋಮೋ/ ಐಟಿಐನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ತಮ್ಮ ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಮತ್ತು ಬಯೋಡೇಟಾ ಪ್ರತಿಗಳೊಂದಿಗೆ ಕಚೇರಿಗೆ ಹಾಜರಾಗಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಇವರನ್ನು ಖುದ್ದಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08172-296374ಕ್ಕೆ ಕರೆ ಮಾಡಬಹುದಾಗಿದೆ.
ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ; ಹಾಸಜ ಜಿಲ್ಲೆಯ ಸರ್ಕಾರಿ ವಕೀಲರ ಹುದ್ದೆಗೆ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ಭರ್ತಿಮಾಡುವ ಸಂಬಂಧವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತುಗಳು ನಿಯಮಗಳು, ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಹಾಸನ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರು ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ವಕೀಲರು ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯದ ಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿಯನ್ನು ಹಾಕಬಹುದು.
ಆಸಕ್ತ ಮತ್ತು ಅರ್ಹರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 8 ಸಂಜೆ 5 ಗಂಟೆಯಾಗಿರುತ್ತದೆ. ಕೆಲ ದಾಖಲಾತಿಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಡಿ. ದೇವರಾಜ ಅರಸು ಭವನ, ವಿದ್ಯಾಗಣಪತಿ ದೇವಸ್ಥಾನದ ಅಡ್ಡರಸ್ತೆ, ಆಕಾಶವಾಣಿ ಹತ್ತಿರ, ಸಾಲಗಾಮೆ ರಸ್ತೆ, ಹಾಸನ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08122-95108. ಕೊನೆಯ ದಿನಾಂಕದ ಬಳಿಕ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ದಾಖಲಾತಿಗಳು; ಅರ್ಜಿಗಳನ್ನು ಸಲ್ಲಿಸುವವರು ಎಸ್. ಎಸ್. ಎಲ್. ಸಿ ಅಂಕಪಟ್ಟಿ ದೃಢೀಕೃತ ಪ್ರತಿ, ಎಲ್. ಎಲ್. ಬಿ ದೃಡೀಕೃತ ಅಂಕಪಟ್ಟಿ, ವಕೀಲ ವೃತ್ತಿಯ ನೋಂದಣಿ ಪ್ರಮಾಣಪತ್ರ, ದೃಢೀಕೃತ ಪ್ರತಿ, ಜಾತಿ ಪ್ರಮಾಣ ಪತ್ರ, ವಕೀಲ ವೃತ್ತಿ ನಡೆಸಿದ ಅನುಭವದ ಕುರಿತು ಸಂಕ್ಷಿಪ್ತ ವಿವರಗಳು, ಅರ್ಜಿದಾರರು ಗಣಕಯಂತ್ರದ ಪರಿಣಿತಿ ಜ್ಞಾನ ಉಳ್ಳವರಾಗಿದ್ದಲ್ಲಿ ಇದರ ಬಗ್ಗೆ ಸಂಕ್ಷಿಪ್ತ ಮಾಹಿತಿ, ಅರ್ಜಿದಾರರ ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.












Click it and Unblock the Notifications