ಹಾಸನ ಗ್ರಾಮ ಲೆಕ್ಕಿಗರ ನೇಮಕಾತಿ, 21 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಜೂನ್ 17 : ಕಂದಾಯ ಇಲಾಖೆಯ ಹಾಸನ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ 17/6/2019 ರಿಂದ 1/7/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ ಇನ್ನಿತರ ಕಾರಣಗಳಿಂದಾಗಿ ತೆರವಾಗಿರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು ಹುದ್ದೆಗಳು 21.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು 1/7/2019 ಕೊನೆಯ ದಿನವಾಗಿದೆ. ಬ್ಯಾಂಕ್‌ನಲ್ಲಿ ಶುಲ್ಕ ಪಾವತಿಸಿ ಚಲನ್ ಅಪ್‌ಲೋಡ್ ಮಾಡಲು 2/7/2019 ಕೊನೆಯ ದಿನವಾಗಿದೆ. 1/7/2019ರ ಬಳಿಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿಗಳನ್ನು ಖುದ್ದಾಗಿ ಅಥವ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿಗಳನ್ನು ಸಲ್ಲಿಸಲು http://hassan.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸುವ ಮೊದಲು ನೇಮಕಾತಿ ಆದೇಶವನ್ನು ಓದಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ವಿದ್ಯಾರ್ಹತೆಯ ವಿವರಗಳು
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರು ನಡೆಸುವ ದ್ವಿತೀಯ ಪಿಯಿಸಿ ಪರೀಕ್ಷೆಯಲ್ಲಿ ಅಥವ ಸಿಬಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು. ಜೆಓಸಿ, ಐಟಿಐ, ತತ್ಸಮಾನ ಪರೀಕ್ಷೆಗಳು, ಮುಕ್ತ ವಿಶ್ವವಿದ್ಯಾಲಯಗಳಿಂದ ಪಡೆದಿರುವ ವಿದ್ಯಾರ್ಹತೆ ಅಂಕಪಟ್ಟಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ವಿವರಗಳು
ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷಗಳು.

ಅರ್ಜಿ ಶುಲ್ಕದ ವಿವರಗಳು
ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ತುಂಬಿದ ಬಳಿಕ ಸಬ್‌ಮಿಟ್ ಬಟನ್ ಒತ್ತಿದಾಗ ರೆಫರೆನ್ಸ್ ನಂಬರ್ ಸೃಷ್ಟಿಯಾಗುತ್ತದೆ. ಅಭ್ಯರ್ಥಿಗಳು ದ್ವಿಪ್ರತಿ ಚಲ್ ತೆಗೆದುಕೊಂಡು ಅರ್ಜಿ ಶುಲ್ಕವನ್ನು ಭರ್ತಿ ಮಾಡಿ ಕಾರ್ಪೊರೇಷನ್ ಬ್ಯಾಂಕ್ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿಸಬೇಕು.
ಪ.ಜಾ./ಪ.ಪಂ/ಪ್ರವರ್ಗ 1/ಅಂಗವಿಕಲ ಅಭ್ಯರ್ಥಿಗಳಿಗೆ 25 ರೂ., 2ಎ/2ಬಿ/3ಎ/3ಬಿ/ಮಹಿಳಾ/ಮಾಜಿ ಸೈನಿಕರಿಗೆ 150 ರೂ.ಗಳು/ಸಾಮಾನ್ಯ ವರ್ಗದವರಿಗೆ 300 ರೂ.ಗಳ ಶುಲ್ಕ ನಿಗದಿ ಮಾಡಲಾಗಿದೆ.

ವೇತನ ಎಷ್ಟು?
ಗ್ರಾಮ ಲೆಕ್ಕಿಗ ಹುದ್ದೆಗೆ 21400-500, 22400-550, 24600-600, 27000-650, 29600-750, 32600-850, 36000-950, 39800-1100, 42000 ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ.












Click it and Unblock the Notifications