ಹಾಸನ; 34 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 04 : ಹಾಸನ ಜಿಲ್ಲಾ ಘಟಕದ ತಾಲೂಕುಗಳಲ್ಲಿ ತೆರವಾಗಿರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು 31/3/2020ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ ಮುಂತಾದ ಕಾರಣಗಳಿಂದಾಗಿ ತೆರವಾಗಿರುವ 34 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಹಾಕಲು ಅವಕಾಶವಿಲ್ಲ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಇ, ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಜೆಓಸಿ/ಐಟಿಐ ಹಾಗೂ ಇತರೆ ತತ್ಸಮಾನ ಪರೀಕ್ಷೆಗಳು ಹಾಗೂ ಮುಕ್ತ ವಿಶ್ವವಿದ್ಯಾಲಗಳಿಂದ ಪಡೆದಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಅಂಗೀಕರಿಸಲಾಗುವುದಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಪ.ಜಾ/ಪ.ಪಂ/ಪ್ರರ್ಗ-1ರ ಅಭ್ಯರ್ಥಿಗಳಿಗೆ 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿಯನ್ನು ತುಂಬಿದ ಬಳಿಕ ಅಭ್ಯರ್ಥಿಗಳು ಸ್ವೀಕೃತಿ ಪತ್ರ, ದ್ವಿಪ್ರತಿ ಚಲನ್ ಪಡೆದುಕೊಳ್ಳಬೇಕು. ಅರ್ಜಿ ಶುಲ್ಕವನ್ನು ಕಾರ್ಪೊರೇಷನ್ ಬ್ಯಾಂಕ್ ಯಾವುದಾದರೂ ಖಾತೆಯಲ್ಲಿ ಪಾವತಿ ಮಾಡಬೇಕು.
ಪ.ಜಾ/ಪ.ಪಂ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 25 ರೂ., 2ಎ/2ಬಿ/3ಎ/3ಬಿ/ಮಹಿಳಾ/ಮಾಜಿ ಸೈನಿಕರಿಗೆ 150 ರೂ., ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications