ಹಾವೇರಿ, ಮೈಸೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾವೇರಿ, ಫೆಬ್ರವರಿ 23: ಹಾವೇರಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 70 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಮತ್ತು 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಂಗನವಾಡಿ ಕಾರ್ಯಕರ್ತೆಗೆ ಎಸ್​ಎಸ್​ಎಲ್​ಸಿ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ 4ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/03/2022 ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆ: 13 ಹುದ್ದೆಗಳು, ಅಂಗನವಾಡಿ ಸಹಾಯಕಿ: 57 ಹುದ್ದೆಗಳು ಸೇರಿದಂತೆ ಒಟ್ಟು 70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Haveri and Mysuru District Anganwadi Recruitment 2022: Apply for 221 Worker And Helper Posts

ಮೈಸೂರಿನಲ್ಲಿ 151 ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 151 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. 10ನೇ ತರಗತಿ ಮತ್ತು 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾರ್ಚ್​​​ 22ರವರೆಗೆ ಅರ್ಜಿ ಹಾಕಬಹುದು. ಫೆಬ್ರವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಬಹುದು.

Haveri and Mysuru District Anganwadi Recruitment 2022: Apply for 221 Worker And Helper Posts

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು: 151
ವಿದ್ಯಾರ್ಹತೆ: 10ನೇ ತರಗತಿ, 4ನೇ ತರಗತಿ ಉತ್ತೀರ್ಣ
ಕೆಲಸದ ಸ್ಥಳ: ಮೈಸೂರು ಜಿಲ್ಲೆ
ವಯೋಮಿತಿ: 18-35 ವರ್ಷ
ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಸುವ ವಿಧಾನ: ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/03/2022

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: ಎಸ್​ಎಸ್​ಎಲ್​ಸಿ
ಅಂಗನವಾಡಿ ಸಹಾಯಕಿ: 4ನೇ ತರಗತಿ, 9ನೇ ತರಗತಿ

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+