• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಅ.8ರೊಳಗೆ ಅರ್ಜಿ ಹಾಕಿ

|

ದಾವಣಗೆರೆ, ಅಕ್ಟೋಬರ್ 02: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 8ರೊಳಗೆ ಅರ್ಜಿ ಸಲ್ಲಿಸಬೇಕು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 13ರಂದು ಸಂದರ್ಶನವನ್ನು ನಡೆಸಲಾಗುತ್ತದೆ.

KRIDE ನೇಮಕಾತಿ 2020: 101 ಎಕ್ಸಿಕ್ಯೂಟಿವ್ ಹುದ್ದೆಗಳಿವೆ

ಫಾರ್ಮಾಸಿಸ್ಟ್ ಹುದ್ದೆ (ವೇತನ 20,000) ಸಂಖ್ಯೆ 10, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ (ವೇತನ 15,000) ಸಂಖ್ಯೆ 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವ ತನಕ ಕೆಲಸ ನಿರ್ವಹಣೆ ಮಾಡಬೇಕು.

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಅ. 15ರೊಳಗೆ ಅರ್ಜಿ ಹಾಕಿ

ನೇರ ಸಂದರ್ಶನದ ಮೂಲಕ ಮೆರಿಟ್ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಅಕ್ಟೋಬರ್ 8 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

FSSAI ನೇಮಕಾತಿ 2020: 66 ಸಹಾಯಕ ಹುದ್ದೆಗಳಿವೆ

ದಾಖಲೆಗಳು: ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರ ಮೂಲ ಮತ್ತು ನಕಲು ಪ್ರತಿಗಳೊಂದಿಗೆ ಸಿ&ಆರ್ ರನ್ವಯವಾಗುವ ಎಲ್ಲಾ ಪೂರಕ ದಾಖಲೆಗಳೊಂದಿಗೆ ದೃಢೀಕರಿಸಿ ಅರ್ಜಿ ಸಲ್ಲಿಸತಕ್ಕದ್ದು.

ನೇರ ಸಂದರ್ಶನ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ, ಎಸ್.ಎಸ್.ಹೈಟೆಕ್ ಆಸ್ಪತ್ರೆ ಹತ್ತಿರ ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಹತ್ತಿರ ನೇರ ಸಂದರ್ಶನ ನಡೆಯಲಿದೆ.

ಆಸಕ್ತ ಅರ್ಜಿಗಳನ್ನು ಪರಿಶೀಲಿಸಿದ ನಂತರ ಅಕ್ಟೋಬರ್ 13 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಹೆಚ್.ಎಸ್ ರಾಘವೇಂದ್ರಸ್ವಾಮಿ ಹೇಳಿದ್ದಾರೆ.

English summary
Health and family welfare department Davanagere invited applications for pharmacist and women's health assistant post. Candidates can apply before October 8, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X