
HESCOM Recruitment; ಹುಬ್ಬಳ್ಳಿಯಲ್ಲಿ ಕೆಲಸ, ಆಸಕ್ತರು ಅರ್ಜಿ ಹಾಕಿ
ಹುಬ್ಬಳ್ಳಿ, ಜನವರಿ 23; ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಪ್ರೆಂಟಿಸ್ ತರಬೇತಿ ಪಡೆಯಲು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆಯಾದವರು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 8 ರಿಂದ 9 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಗ್ರಾಜುಯೇಟ್ ಅಪ್ರೆಂಟಿಸ್ 125 ಮತ್ತು ಡಿಪ್ಲೊಮಾ ಅಪ್ರೆಂಟಿಸ್ 75 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
KSAT Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನೇಮಕಾತಿ, ಅರ್ಜಿ ಹಾಕಿ
ಗ್ರಾಜುಯೇಟ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಹಾಕುವವರು ಬಿಇ ಅಥವ ಬಿ.ಟೆಕ್ ಪದವಿ ಪಡೆದಿರಬೇಕು. ಡಿಪ್ಲೋಮಾ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಹಾಕುವವರು ಡಿಪ್ಲೋಮಾ ವ್ಯಾಸಂಗ ಮಾಡಿರಬೇಕು.
ಶಿವಮೊಗ್ಗ: ಜನವರಿ 24ರಂದು ಉದ್ಯೋಗ ಮೇಳ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ನೇಮಕಾತಿ ನಿಯಮದ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮದ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.
ಕರ್ನಾಟಕದ 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ಹೊಂದಲು ವಿವೇಕಾನಂದರ ಯೋಜನೆ ಜಾರಿ: ಬೊಮ್ಮಾಯಿ
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲೆಗಳ ಪರಿಶೀಲನೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಆದ್ದರಿಂದ ಸರಿಯಾದ ಇ-ಮೇಲ್ ಐಡಿಯನ್ನು ನಮೂದಿಸಬೇಕಾಗಿದೆ.
ಅಪ್ರೆಂಟಿಸ್ ಹುದ್ದೆಗೆ ನೋಂದಣಿ ಮಾಡಿಕೊಳ್ಳಲು ಜನವರಿ 25 ಕೊನೆಯ ದಿನ. ಜನವರಿ 30ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಫೆಬ್ರವರಿ 3ರಂದು ಮೆರಿಟ್ ಲಿಸ್ಟ್ ಪ್ರಕಟಿಸಲಾಗುತ್ತದೆ.
ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳು ಫೆಬ್ರವರಿ 16ರಂದು ನಡೆಯುವ ದಾಖಲಾತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕಿದೆ.
ವಿಳಾಸ; Executive Engineer (Ele.), ITI, HESCOM, Karwar Road, Vidyut Nagar, Hubballi.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ hescom.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. knplacement@boat-srp.com ಅಥವ 044-22542235, 0836-2956611 ಸಂಖ್ಯೆಗೆ ಕರೆ ಮಾಡಬಹುದಾಗಿದೆ.