ಕೆಎಎಸ್ ನೇಮಕಾತಿ: 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಅತಿ ಹೆಚ್ಚು ಚರ್ಚೆಯಲ್ಲಿರುವ ವಿಚಾರ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿಗಾಗಿ ನಡೆಸಿದ ಪೂರ್ವಭಾವಿ ಪರೀಕ್ಷೆ. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಬಿಡುಗಡೆಗೊಂಡಿದೆ. ಮುಖ್ಯ ಪರೀಕ್ಷೆಯ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿನ ದೋಷದ ಕಾರಣಕ್ಕೆ ನ್ಯಾಯ ಒದಗಿಸಬೇಕು ಎಂದು ಹಲವು ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರ ಎಂ. ಕೃಷ್ಣ ಸೇರಿ 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಯನ್ನು ಬರೆಯಲಯ ಅಂತಿಮ ತೀರ್ಪಿಗೆ ಒಳಪಟ್ಟು ಅವಕಾಶ ನೀಡಿದೆ. ಮುಖ್ಯ ಪರೀಕ್ಷೆಯನ್ನು ದಿನಾಂಕ 03-05-2025, 05-05-2025, 07-05-2025 ಮತ್ತು 09-05-2025 ರಂದು ನಡೆಸಲು ಈಗಾಗಲೇ ದಿನಾಂಕ ನಿಗದಿ ಮಾಡಲಾಗಿದೆ.

34 ಅಭ್ಯರ್ಥಿಗಳು ಕೋರ್ಟ್ ಅಂತಿಮ ತೀರ್ಪಿಗೆ ಒಳಪಟ್ಟು ಮುಖ್ಯ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈಗಾಗಲೇ ಮುಖ್ಯ ಪರೀಕ್ಷೆಯ ಹಾಲ್‌ಟಿಕೆಟ್ ಅನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ತಪ್ಪುಗಳನ್ನು ಪ್ರಶ್ನಿಸಿ ಸಂಘಟಿತವಾಗಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ 34 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಕೆಪಿಎಸ್‌ಸಿ ಪ್ರಕಟಣೆ: 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಕುರಿತು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಯಾವ-ಯಾವ ಅಭ್ಯರ್ಥಿಗಳು ಎಂದು ಹೆಸರನ್ನು ಸಹ ಪ್ರಕಟಿಸಿದೆ.
ಪ್ರಕಟಣೆಯಲ್ಲಿ ಆಯೋಗವು ಅಧಿಸೂಚಿಸಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ - ಎ ಮತ್ತು ಗ್ರೂಪ್ - ಬಿ ವೃಂದದ 384 ಹುದ್ದೆಗಳ ನೇಮಕಾತಿಯ ಮುಖ್ಯಪರೀಕ್ಷೆಗೆ ದಿನಾಂಕ 13-02-2025ರಂದು ಅಧಿಸೂಚನೆಯನ್ನು ಹೊರಡಿಸಿದ್ದು ದಿನಾಂಕ 03-05-2025, 05-05-2025, 07-05-2025 ಮತ್ತು 09-05-2025ರಂದು ಮುಖ್ಯ ಪರೀಕ್ಷೆಯನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಿದ್ದು, ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗಿರುತ್ತದೆ ಎಂದು ಹೇಳಿದೆ.
ಪ್ರಸ್ತುತ ವಿವಿಧ ರಿಟ್ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಲಾದ ಆದೇಶ Petitioner is permitted to appear and take the main examination as scheduled subject to outcome of the petition. Petitioner shall not plead any equity ಎಂದು ಆದೇಶಿಸಿದ್ದು, ಅದರಂತೆ 34 ರಿಟ್ ಅರ್ಜಿದಾರರ ಹೆಸರನ್ನು ಪ್ರಕಟಿಸಿದೆ.
1) ಕೃಷ್ಣ ಎಂ. 2) ಮಹೇಶ ಬಿ.ಸಿ. 3) ಪ್ರಕಾಶ್ ಎಸ್. 4) ನಾಗರಾಜ್ 5) ಕ್ರಾಂತಿ ಕುಮಾರ್ ಎಂ. 6) ಶಿಲ್ಪ ಆರ್. 7) ಸರಸ್ವತಿ ರಾಮಕೃಷ್ಣ ಹೆಬ್ಬಾರ್ 8) ರಾಗಿಣಿ ಡಿ. ಆರ್. 9) ಲಕ್ಷ್ಮಿ ಎಸ್. 10) ಕೃಷ್ಣಮೂರ್ತಿ ಸಿ.ಎಸ್. 11) ಸತೀಶ ಕೆ.ಆರ್.12) ತ್ರಿವೇಣಿ ಡಿ. ಎಂ. 13) ಗುರಿಕರ ಶಿವಾನಂದ 14) ನೇತ್ರ ಕೆ. 15) ಧನಂಜಯ್ ಎ. ಆರ್. 16) ಲೋಕೆಶ 17) ಉಮೇಶ ಕೆ. ಎಂ. 18) ರಘು ಎಂ. 19) ಅಪ್ಪಲಾಲ್ ನಾಯಕ್ 20) ಚಂದ್ರಕಲಾ ಬಿ. 21) ಗುಣರಾಣಿ ಡಿ. ಎಂ. 22) ಆಂಜನೇಯ ಎಸ್. 23) ಪವಿತ್ರ ಡಿ. 24) ರಾಕೇಶ್ ಕಾಂಬ್ಳೆ 25) ವಸಂತ್ ನಾಯಕ್ ವಾಡಿ 26) ನಾಗೇಶ್ ಎ. 27) ಮಲ್ಲಮ್ಮ 28) ಸಿದ್ದೇಶ್ವರ ಎಸ್. 29) ಪ್ರದೀಪ್ ಕುಮಾರ್ ಹೆಗಡೆ ಬಿ. ಎಲ್. 30) ವಿಶ್ವನಾಥ 31) ಪ್ರಕಾಶ ಎಸ್. 32) ಶ್ರೀಹರ್ಷ ಎಂ. ಬಿ. 33) ಅಣ್ಣಪ್ಪ ಹೊಸೂರು 34) ವಿ. ಡಿ. ಸಿಂಚನ ಇವರುಗಳಿಗೆ ನ್ಯಾಯಾಲಯವು ಹೊರಡಿಸುವ ಅಂತಿಮ ತೀರ್ಪಿಗೊಳಪಟ್ಟಂತೆ ಆಯೋಗವು ಮುಖ್ಯಪರೀಕ್ಷೆ ಬರೆಯಲು ಆಫ್‌ಲೈನ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುತ್ತದೆ ಎಂದು ಹೇಳಿದೆ.
ಮುಖ್ಯ ಪರೀಕ್ಷೆಯ ಅರ್ಜಿ ನಮೂನೆಯನ್ನು ಆಯೋಗದ ಅಂತರ್ಜಾಲ http://kpsc.kar.nic.inನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಸದರಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಪರೀಕ್ಷಾ ಶುಲ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೆ ರೂ. 300/- & ಇತರೆ ಅಭ್ಯರ್ಥಿಗಳಿಗೆ ರೂ. 500/-)ವನ್ನು ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಇವರ ಹೆಸರಿಗೆ ಡಿಡಿ/ ಐಪಿಓ ಪಡೆದು ದಿನಾಂಕ 28-04-2025ರ ಸಂಜೆ 5 ಗಂಟೆಯೊಳಗಾಗಿ ಆಯೋಗದ ಕೇಂದ್ರ ಕಛೇರಿಗೆ ಮುದ್ದಾಂ/ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದು ಎಂದು ತಿಳಿಸಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಅದನ್ನು ಓದಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications