ಗೃಹರಕ್ಷಕ ದಳದ ನೇಮಕಾತಿ; ಹುದ್ದೆ ಸಂಖ್ಯೆ, ವಿವರ
ಬೆಂಗಳೂರು, ಡಿಸೆಂಬರ್ 04; ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರುಷ ಒಟ್ಟು 171 ಮತ್ತು ಮಹಿಳೆ 8 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಡಿಸೆಂಬರ್ 8ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಕಛೇರಿಯಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಪುರುಷ 39, ಮಹಿಳೆ 6 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 9880705966, 9916573291, 9686631428, 9900283490, 9986760750, 8105840345, 9535388472ರಿ ಟಿ.ಶಶಿಧರಾಚಾರ್ಯ -9741477689 ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಂದ 12 ಕಿ. ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು.
ತರಬೇತಿಗಾಗಿ ಅರ್ಜಿ ಆಹ್ವಾನ; ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ 2024ನೇ ಜನವರಿಯಿಂದ ಆರು ತಿಂಗಳ ರೆಗ್ಯುಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಆಯೋಜಿಸಲಾಗಿದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಹಾಗೂ ಸಹಕಾರ ಸಂಘ/ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಈ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪ.ಜಾತಿ/ ಪ.ಪಂ.ದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ.
ಆಸಕ್ತರು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ವಿನೋಬನಗರ, ಶಿವಮೊಗ್ಗ ಇಲ್ಲಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15 ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08182-248873/ 7022429440 ಸಂಖ್ಯೆಗಳಿಗೆ ಕರೆ ಮಾಡಬಹುದು.












Click it and Unblock the Notifications