ತೋಟಗಾರಿಕಾ ಇಲಾಖೆಯಲ್ಲಿ 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ 04 : ತೋಟಗಾರಿಕಾ ಇಲಾಖೆಯಲ್ಲಿ 200 ತೋಟಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 7/3/2019 ಕೊನೆಯ ದಿನವಾಗಿದೆ.
ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 6/3/2019 ಕೊನೆಯ ದಿನವಾಗಿದೆ.
ಪವರ್ ಗ್ರಿಡ್ ಕಾರ್ಪ್ ನಲ್ಲಿ 42 ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳಿವೆ
ವಿದ್ಯಾರ್ಹತೆ : ಅರ್ಜಿಗಳನ್ನು ನಿಗದಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
*
ಎಸ್ಎಸ್ಎಲ್ಸಿ
ಅಥವ
ತತ್ಸಮಾನ
ಪರೀಕ್ಷೆಯಲ್ಲಿ
ಉತ್ತೀರ್ಣರಾಗಿರಬೇಕು
*
ತೋಟಗಾರಿಕಾ
ಇಲಾಖೆಯಿಂದ
ನಡೆಸಲಾದ
10
ತಿಂಗಳ
ತೋಟಗಾರಿಕೆ
ತರಬೇತಿಯನ್ನು
ಪಡೆದಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಠ ವಯೋಮಿತಿ ಮೀರಿರಬಾರದು. ಅರ್ಜಿ ಸಲ್ಲಿಸಲು 18 ವರ್ಷ ಕನಿಷ್ಠ ವಯೋಮಿತಿ ಹೊಂದಿರಬೇಕು.
ನಿರುದ್ಯೋಗ ಸಮಸ್ಯೆ ಕುರಿತ ವರದಿಯ ಬಗ್ಗೆ ನೀತಿ ಆಯೋಗ ಸ್ಪಷ್ಟನೆ
ಸಾಮಾನ್ಯ ವರ್ಗದವರಿಗೆ 35, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಶುಲ್ಕಗಳು : ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ., ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 150 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ