ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೋಟಗಾರಿಕಾ ಇಲಾಖೆಯಲ್ಲಿ 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಫೆಬ್ರವರಿ 04 : ತೋಟಗಾರಿಕಾ ಇಲಾಖೆಯಲ್ಲಿ 200 ತೋಟಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 7/3/2019 ಕೊನೆಯ ದಿನವಾಗಿದೆ.

ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 6/3/2019 ಕೊನೆಯ ದಿನವಾಗಿದೆ.

ಪವರ್ ಗ್ರಿಡ್ ಕಾರ್ಪ್ ನಲ್ಲಿ 42 ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳಿವೆ ಪವರ್ ಗ್ರಿಡ್ ಕಾರ್ಪ್ ನಲ್ಲಿ 42 ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳಿವೆ

ವಿದ್ಯಾರ್ಹತೆ : ಅರ್ಜಿಗಳನ್ನು ನಿಗದಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

Horticulture department recruitment 72 Gardner post

* ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
* ತೋಟಗಾರಿಕಾ ಇಲಾಖೆಯಿಂದ ನಡೆಸಲಾದ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಠ ವಯೋಮಿತಿ ಮೀರಿರಬಾರದು. ಅರ್ಜಿ ಸಲ್ಲಿಸಲು 18 ವರ್ಷ ಕನಿಷ್ಠ ವಯೋಮಿತಿ ಹೊಂದಿರಬೇಕು.

ನಿರುದ್ಯೋಗ ಸಮಸ್ಯೆ ಕುರಿತ ವರದಿಯ ಬಗ್ಗೆ ನೀತಿ ಆಯೋಗ ಸ್ಪಷ್ಟನೆ ನಿರುದ್ಯೋಗ ಸಮಸ್ಯೆ ಕುರಿತ ವರದಿಯ ಬಗ್ಗೆ ನೀತಿ ಆಯೋಗ ಸ್ಪಷ್ಟನೆ

ಸಾಮಾನ್ಯ ವರ್ಗದವರಿಗೆ 35, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಶುಲ್ಕಗಳು : ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ., ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 150 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Karnataka Horticulture department invites application for the post of 200 Gardner post. Candidates can apply before 7/3/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X