ಕುವೈತ್‌ನ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌ನಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜೂನ್ 13; ಕುವೈತ್‌ನ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌ನಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತ, ಅರ್ಹರು ಹೆಸರು ನೋಂದಣಿ ಮಾಡಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಪ್ರತಿ ತಿಂಗಳಿಗೆ 13 ರಿಂದ 16 ಸಾವಿರ ರೂ. ನಿಗದಿ ಮಾಡಲಾಗಿದೆ.
ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ. ಎಸ್. ಬಸವರಾಜಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. ಕುವೈತ್‌ನ ಬೆಂಗಳೂರು ಹೋಟೆಲ್ ಅಸೋಶಿಯೇಶನ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಸಬೇಕು ಎಂದು ಕರೆ ನೀಡಿದ್ದಾರೆ.

ಹೆಸರು ನೋಂದಣಿ ಮಾಡುವವರು ಎಸ್. ಎಸ್. ಎಲ್. ಸಿ, ಪಿಯುಸಿ ಹಾಗೂ ಡಿಪ್ಲೊಮಾ ಉತ್ತಿರ್ಣರಾಗಿರಬೇಕು ಅಥವಾ ಅನುತ್ತೀರ್ಣರಾದವರು ನೋಂದಣಿ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಜೂನ್ 15ರಂದು ನೇರ ಸಂದರ್ಶನ ನಡೆಯಲಿದೆ.
ವೇತನದ ವಿವರ; ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 13 ಸಾವಿರದಿಂದ 16 ಸಾವಿರದ ತನಕ ವೇತನ ಇರುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಮಾನ ಅವಕಾಶವಿದ್ದು, ಊಟ ಮತ್ತು ವಸತಿ ಸೌಲಭ್ಯ ಇರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 8073852104, 9964502514 ಸಂಖ್ಯೆಗೆ ಕರೆ ಮಾಡಬಹುದು.
ಬೆಂಗಳೂರಿನಲ್ಲಿ ನೇರ ಸಂದರ್ಶನ; ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಹಯೋಗದಲ್ಲಿ ಜೂನ್ 15ರಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯ ಮಿಷನ್, ಕೌಶಲ್ಯ ಭವನ, ಬನ್ನೇರುಘಟ್ಟ ರಸ್ತೆ, ಡೈರಿ ವೃತ್ತ, ಬೆಂಗಳೂರು-29 ಇಲ್ಲಿ ನೇರ ಸಂದರ್ಶನ ಆಯೋಜನೆ ಮಾಡಿದೆ.
ಬೆಂಗಳೂರು ನಗರದ ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಸ್ವೀವರ್ಡ್, ಕ್ಯಾಪ್ಟನ್, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಹಾಗೂ ಇತರ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ನೇಮಕಾತಿ ನಡೆಯಲಿದೆ.
ಆಸಕ್ತರು, ನಿಗಮದ ಜಾಲತಾಣ https://tinyurl.com/ksdcjobdrive ರಲ್ಲಿ ನೋಂದಾಯಿಸಿಕೊಂಡು ಪಾಲ್ಗೊಳ್ಳಬಹುದು ಅಥವಾ ಜೂನ್ 15 ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭಾಗವಹಿಸ ಬಹುದು.
ಹೆಚ್ಚಿನ ಮಾಹಿತಿಗಾಗಿ 9019485688/ 08182-255294 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications