ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಚ್‌ಪಿಸಿಎಲ್

ಬೆಂಗಳೂರು, ಅಕ್ಟೋಬರ್ 04 : ಎಚ್‌ಪಿಸಿಎಲ್ 122 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31, 2018 ಕೊನೆಯ ದಿನವಾಗಿದೆ.

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್) ಅಸಿಸ್ಟೆಂಟ್ ಪ್ರೊಸೆಸ್ ಟೆಕ್ನಿಶಿಯನ್, ಫೈರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅಸಿಸ್ಟೆಂಟ್ ಪ್ರೊಸೆಸ್ ಟೆಕ್ನಿಶಿಯನ್ ಅರ್ಜಿ ಹಾಕುವವರು ಬಿಎಸ್‌ಸಿಯಲ್ಲಿ ಕೆಮಿಸ್ಟ್ರಿ ವಿಷಯದಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕೆಮಿಕಲ್ ಇಂಜಿನಿಯರಿಂಗ್‌ನಲ್ಲಿ ಕೆಮಿಸ್ಟ್ರಿ ವಿಷಯದಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣಗೊಂಡಿರಬೇಕು.

HPCL recruitment 2018 : Apply for 122 Various Vacancies

ಫೈರ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಇಂಟರ್ ಮಿಡಿಯಟ್/12 ಉತ್ತೀರ್ಣರಾಗಿರಬೇಕು. ಬೇಸಿಕ್ ಫೈರ್ ಫೈಟಿಂಗ್ ಕೋರ್ಸ್ ಅನ್ನು ಸ್ಟೇಟ್ ಫೈರ್ ಟ್ರೈನಿಂಗ್ ಸೆಂಟರ್‌ನಿಂದ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (ಅಕ್ಟೋಬರ್ 1,
2018 ಕ್ಕೆ ಅನ್ವಯವಾಗುವಂತೆ).

ವೇತನ ಶ್ರೇಣಿ : 47800 ರೂ.ಗಳು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಕಂಪ್ಯೂಟರ್ ಮೂಲಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+