ಹೆಚ್‌ಪಿಸಿಎಲ್ ನೇಮಕಾತಿ; ಏ.15ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 03: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌) 200 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 15/4/2021 ಕೊನೆಯ ದಿನವಾಗಿದೆ.

ಹೆಚ್‌ಪಿಸಿಎಲ್ ಇಂಜಿನಿಯರ್ E2 ಗ್ರೇಡ್ ಹುದ್ದೆಗಳ ಭರ್ತಿಗೆ ಬಿಇ/ಬಿಟೆಕ್ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಕೊನೆಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಹಾಕಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ 50,000 ರೂ. ವೇತನ ಮತ್ತು ವಿವಿಧ ಭತ್ಯೆಗಳು ಸಿಗಲಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.

HPCL Recruitment 2021 Without GATE; Apply Before 15th April 2021

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ ನಾಲ್ಕು ವರ್ಷದ ಕೋರ್ಸ್ ಪೂರ್ಣಗೊಳಿಸಿರಬೇಕು. ಮೆಕಾನಿಕಲ್, ಮೆಕಾನಿಕಲ್& ಪ್ರೊಡಕ್ಷನ್, ಸಿವಿಲ್, ಎಲೆಕ್ಟ್ರಿಕಲ್ ಪದವಿಗಳಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಮೆಕಾನಿಕಲ್ 120, ಸಿವಿಲ್ 30, ಎಲೆಕ್ಟ್ರಿಕಲ್ 25, ಇನ್‌ಸ್ಟ್ರುಮೆಂಟೇಶನ್ 25 ಹುದ್ದೆಗಳಿವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 3 ಮಾರ್ಚ್ 2021ಕ್ಕೆ ಅನ್ವಯವಾಗುವಂತೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸರ್ಕಾರಿ ಆದೇಶದಂತೆ ಎಸ್‌ಸಿ/ ಎಸ್‌ಟಿ/ ಒಬಿಸಿ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

ಆಸಕ್ತರು ಮಾರ್ಚ್ 3ರಿಂದ 15 ಏಪ್ರಿಲ್ 2021ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸಹ ಪಾವತಿ ಮಾಡಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+