ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ನೇಮಕಾತಿ; ಅರ್ಜಿ ಹಾಕಿ

ಬೆಂಗಳೂರು, ಜನವರಿ 30 : ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 15/2/2020 ಕೊನೆಯ ದಿನಾಂಕವಾಗಿದೆ.

ಪ್ರಾಜೆಕ್ಟ್ ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ.

ಪ್ರಾಜೆಕ್ಟ್ ಇಂಜಿನಿಯರ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಕಲ್ ಅಸಿಸ್ಟೆಂಟ್, ಪ್ರಾಜೆಕ್ಟ್ ಆಫೀಸರ್ (ಎಂಐಎಸ್), ಪಬ್ಲಿಕ್ ರಿಲೇಶನ್ ಆಫೀಸರ್, ಅಸಿಸ್ಟೆಂಟ್ ಹಾರ್ಟಿಕಲ್ಚರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

Hubballi Dharwad Smart City Recruitment 2020

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌ಸಿಟಿಯು ಕೇಂದ್ರ ಸರ್ಕಾರದ ಸ್ಮಾರ್ಟ್‌ಸಿಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಶೇಷ ವಾಹಕ ಸಂಸ್ಥೆಯಾಗಿ ಕಾರ್ಯ ನಿರ್ವಹಣೆ ಮಾಡುತ್ತದೆ. ವಿವಿಧ ಹುದ್ದೆಗಳ ವಿದ್ಯಾರ್ಹತೆ ವಿವರಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ಉದ್ದೇಶಿತ ಸಂಸ್ಥೆಯಲ್ಲಿ ಪ್ರಮುಖ ಹುದ್ದೆಗಳಿಗೆ ಗುತ್ತಿಗೆ ಅಡಿಯಲ್ಲಿ 1 ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಹಾಗೂ ಒಂದು ವರ್ಷದ ಅವಧಿ ಮೀರದಂತೆ ಮುಂದುವರೆಸಲು (ಕಾರ್ಯನಿರ್ವಹಣೆ ಮತ್ತು ಯೋಜನಗೆ ಅವಶ್ಯಕತೆಗೆ ಅನುಗುನವಾಗಿ) ಅರ್ಹ ವ್ಯಕ್ತಿಗಳಿಂದ ಅರ್ಜಿ ಕರೆಯಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಶಿಕ್ಷಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್‌ನೊಂದಿಗೆ ಇ-ಮೇಲ್ ಮಾಡಬಹುದು. ಅರ್ಜಿಗಳು www.hubballidharwadsmartcity.com ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಅರ್ಜಿಗಳನ್ನು ಸಲ್ಲಿಸಲು ಇ-ಮೇಲ್ ವಿಳಾಸ [email protected]. ಅರ್ಜಿಗಳನ್ನು ಸ್ವೀಕರಿಸಿದ ಬಳಿಕ ಆಯ್ಕೆ ಸಮಿತಿಯು ಸಂದರ್ಶನ ಜರುಗಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ.

ಅರ್ಜಿ ಸಲ್ಲಿಸಿದವರು ಹುದ್ದೆಗೆ ಅನುಗುಣವಾಗಿ ಶಿಕ್ಷಣ, ಅನುಭವ ಮತ್ತು ಇತರೆ ದಾಖಲೆಗಳನ್ನು ಎರಡು ಪ್ರತಿಗಳಲ್ಲಿ ಸ್ವಂತ ದೃಢೀಕರಣದೊಂದಿಗೆ ಕಳಿಸಬೇಕಾಗಿದೆ.

ವಿಳಾಸ

jobs
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+