IAF Agniveer Recruitment 2025: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರರ ಹುದ್ದೆಗಳಿಗೆ ಅರ್ಜಿ ಆಹ್ವಾನ
Agniveer Recruitment: ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್‌ಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಕೆ ಜನವರಿ 7, 2025ರಿಂದ ಆರಂಭವಾಗಲಿದ್ದು, ಜನವರಿ 27 ಕೊನೆಯ ದಿನಾಂಕ ಆಗಿದೆ. ಮಾರ್ಚ್ 22ರಿಂದ ನೇಮಕ ಪರೀಕ್ಷೆಗಳು ಆರಂಭವಾಗಲಿವೆ.
ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಏನೆಲ್ಲಾ ಅರ್ಹತೆಗಳನ್ನಯ ಹೊಂದಿರಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ agnipathvayu.cdac.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. 12ನೇ ತರಗತಿಯಲ್ಲಿ ಒಟ್ಟಾರೆಯಾಗಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕಾಗುತ್ತದೆ. ಹಾಗೆಯೇ ಇಂಗ್ಲಿಷ್‌ನಲ್ಲಿಯೂ ಶೇಕಡ 50ರಷ್ಟು ಅಂಕಗಳನ್ನು ಪಡೆದಿರಬಾಕಗುತ್ತದೆ.

ವಯಸ್ಸಿನ ಮಿತಿ ಹಾಗೂ ಅರ್ಜಿ ಶುಲ್ಕದ ವಿವರ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 17.5 ವರ್ಷಗಳು ಮತ್ತು ಗರಿಷ್ಠ ವಯಸ್ಸು 21 ವರ್ಷ ಆಗಿದೆ. ವಯಸ್ಸು 1 ಜನವರಿ 2005ರಿಂದ 1 ಜನವರಿ 2008ರ ನಡುವೆ ಇರಬೇಕು. ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 550 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು SC/ST/PH ವರ್ಗದ ಅಭ್ಯರ್ಥಿಗಳು ಕೇವಲ 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ.
ವೈದ್ಯಕೀಯ ಮಾನದಂಡಗಳು: ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 152 ಸೆಂ.ಮೀ ಎತ್ತರ ಇರಬೇಕಾಗುತ್ತದೆ.ಪುರುಷ ಅಭ್ಯರ್ಥಿಗಳು ಕನಿಷ್ಠ 77 ಸೆಂ.ಮೀ ಎದೆಯ ಸುತ್ತಳತೆ ಹೊಂದಿರಬೇಕು ಮತ್ತು 5 ಸೆಂ.ಮೀ ವಿಸ್ತರಣೆಯನ್ನು ಹೊಂದಿರಬೇಕು. ಇನ್ನು ಮಹಿಳಾ ಅಭ್ಯರ್ಥಿಗಳು 5 ಸೆಂ.ಮೀ. ಎದೆಯ ವಿಸ್ತರಣೆಯನ್ನು ಹೊಂದಿರಬೇಕಾಗುತ್ತದೆ ಎಂದು ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಮೊದಲಿಗೆ agnipathvayu.cdac.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೊಸ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬಳಿಕ ಲಾಗಿನ್ ಮಾಡಿ ಮತ್ತು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಲಗತ್ತಿಸಬೇಕಾಗುತ್ತದೆ. ಕೊನೆಯದಾಗಿ ಶುಲ್ಕವನ್ನು ಪಾವತಿಸುವ ಮೂಲಕ ಫಾರ್ಮ್ ಅನ್ನು ಸಲ್ಲಿಸಿ ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳ ವಿವರ
* SSLC ಅಂಕಪಟ್ಟಿ
* 12ನೇ ತರಗತಿ ವಿಜ್ಞಾನ ವಿಭಾಗ/ತತ್ಸಮಾನ ವಿದ್ಯಾರ್ಹತೆ ದಾಖಲೆ.
* 2 ವರ್ಷದ ವೃತ್ತಿಪರ ಕೋರ್ಸ್ ಪಾಸ್ ಮಾಡಿದ ಸರ್ಟಿಫಿಕೇಟ್.
* ಪಾಸ್ಪೋರ್ಟ್ ಅಳತೆಯ ಭಾವಚಿತ್ರ
* ಅಭ್ಯರ್ಥಿ ಸಹಿ ಸ್ಕ್ಯಾನ್ ಕಾಪಿ
* ಅಭ್ಯರ್ಥಿ ಎಡಗೈ ಹೆಬ್ಬೆರಳು ಥಂಬ್ ಇಂಪ್ರೆಷನ್ ಸ್ಕ್ಯಾನ್ ಕಾಪಿ
* ಪೋಷಕರ ಸಹಿ
* ಅರ್ಜಿ ಶುಲ್ಕವನ್ನು ಆನ್‌ಲೈನ್, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು.












Click it and Unblock the Notifications