ಗುಪ್ತಚರ ಇಲಾಖೆಯಲ್ಲಿ 1300 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 22 : ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1300 ಸಹಾಯಕ ಗುಪ್ತಚರ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 951, ಹಿಂದೂಳಿದ ವರ್ಗ 184, ಎಸ್ಸಿ, 109 ಹಾಗೂ ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 56 ಹುದ್ದೆಗಳು ಮೀಸಲಿದ್ದು, ಆಸಕ್ತರು ನಿಗದಿತ ದಿನಾಂಕ 02-09-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ ಎಲ್ಲಿ?: ಭಾರತದಾದ್ಯಂತ
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ.
ವಿದ್ಯಾರ್ಹತೆ: ಸರ್ಕಾಗಳ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಯಾವುದಾದರೂ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications