1599 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಐಬಿಪಿಎಸ್

ಬೆಂಗಳೂರು, ಅಕ್ಟೋಬರ್ 30 : ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ 1599 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 26, 2018ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ಐಟಿ ಆಫೀಸರ್, ಅಗ್ರಿಕಲ್ಚರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಐಟಿ ಆಫೀಸರ್ 219 ಹುದ್ದೆ, ಅಗ್ರಿಕಲ್ಚರ್ ಆಫೀಸರ್ 853 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 26 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಆನ್‌ಲೈನ್ ಪರೀಕ್ಷೆ, ಆನ್‌ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ...

ವಿದ್ಯಾರ್ಹತೆಯ ವಿವರ

ವಿದ್ಯಾರ್ಹತೆಯ ವಿವರ

ಐಟಿ ಆಫೀಸರ್ ಹುದ್ದೆಗೆ 4ವರ್ಷದ ಇಂಜಿನಿಯರಿಂಗ್/ಟೆಕ್ನಿಕಲ್ ಡಿಗ್ರಿ ಇನ್ ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಅಪ್ಲಿಕೇಶನ್/ಇನ್‌ಫರ್‌ಮೇಶನ್ ಟೆಕ್ನಾಲಜಿ/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್‌ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್‌& ಕಮ್ಯೂನಿಕೇಷನ್/ಎಲೆಕ್ಟ್ರಾನಿಕ್ಸ್&Instrumentation.

ಎಲೆಕ್ಟ್ರಾನಿಕ್ಸ್‌/ಎಲೆಕ್ಟ್ರಾನಿಕ್ಸ್ &ಟೆಲೆಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್&Instrumentation/ಕಂಪ್ಯೂಟರ್ ಸೈನ್ಸ್/ಇನ್‌ಫರ್‌ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ಅಗ್ರಿಕಲ್ಚರ್ ಆಫೀಸರ್ ಹುದ್ದೆಗೆ 4 ವರ್ಷದ ಡಿಗ್ರಿ (ಪದವಿ) ಇನ್ ಅಗ್ರಿಕಲ್ಚರ್/ಹಾರ್ಟಿಕಲ್ಚರ್/Animal Husbandry/ವೆಟರ್ನರಿ ಸೈನ್ಸ್/ಡೈರಿ ಸೈನ್ಸ್/Fishery Science/ Pisciculture/Agri ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

ಮಾರ್ಕೆಟಿಂಗ್ & ಸಹಕಾರ/ಸಹಕಾರ& ಬ್ಯಾಂಕಿಂಗ್/Agro-Forestry/Forestry/ Agricultural Biotechnology/ಫುಡ್‌ಸೈನ್ಸ್/ಅಗ್ರಿಕಲ್ಚರ್ ಇನ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್/ಫುಡ್ ಟೆಕ್ನಾಲಜಿ/ಡೈರಿ ಟೆಕ್ನಾಲಜಿ/ಅಗ್ರಿಕಲ್ಚರ್ ಇಂಜಿನಿಯರಿಂಗ್ ಪೂರ್ಣಗೊಳಿಸಿದವರು ಅರ್ಜಿ ಹಾಕಬಹುದು.

ಆನ್‌ಲೈನ್ ಮೂಲಕ ಅರ್ಜಿ

ಆನ್‌ಲೈನ್ ಮೂಲಕ ಅರ್ಜಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನವೆಂಬರ್ 26, 2018ಕ್ಕೆ ಅನ್ವಯವಾಗುವಂತೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 26 ಕೊನೆ ದಿನ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಉಳಿದ ಅಭ್ಯರ್ಥಿಗಳಿಗೆ 600 ರೂ. ಶುಲ್ಕವನ್ನು ನಿಗದಿ ಪಡಿಸಲಾಗಿದೆ.

ಪ್ರಮುಖ ದಿನಾಂಕಗಳು

ಪ್ರಮುಖ ದಿನಾಂಕಗಳು

* ನವೆಂಬರ್ 6ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ
* ನವೆಂಬರ್ 26 ಕೊನೆಯ ದಿನವಾಗಿದೆ
* ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+