4012 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಐಬಿಪಿಎಸ್

ಬೆಂಗಳೂರು, ಆಗಸ್ಟ್ 23 : ಐಬಿಪಿಎಸ್ 4012 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 4, 2018 ಕೊನೆಯ ದಿನವಾಗಿದೆ.

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(ಐಬಿಪಿಎಸ್) Probationary Officer/Management Trainee ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾಗುವ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಇಲ್ಲವೇ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

IBPS recruitment 2018 : Apply for 4102 Various Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ (1 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಯವರಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಹಾಕುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ., ಇತರ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+