7275 ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 21 : ಐಬಿಪಿಎಸ್ 7275 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 10 ಅಕ್ಟೋಬರ್ 2018 ಕೊನೆಯ ದಿನವಾಗಿದೆ.
ಇನ್ಸಿಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲಕ್ (Clerical Cadre) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವೇತನ ಶ್ರೇಣಿ 7200 ರಿಂದ 19,3000 ರೂ.ಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಸೆಪ್ಟೆಂಬರ್ 2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕದ ವಿವರ : ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 600 ರೂ. ಶುಲ್ಕ, ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
* 18/9/2018 ರಿಂದ ಅರ್ಜಿಗಳನ್ನು ಸಲ್ಲಿಸಬಹುದು
* 10/10/2018 ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications