IBPS ನೇಮಕಾತಿ 2019: 1163 ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ನವೆಂಬರ್ 06: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 26.11.2019 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)
ಹುದ್ದೆ ಹೆಸರು: CWE SPL IX
ಒಟ್ಟು ಹುದ್ದೆ: 1163
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.11.2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಎಂಬಿಎ, ಸಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

IBPS recruitment 2019 apply for 1163 CWE SPL IX Vacancies

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 30 ವರ್ಷಗಳು(ನವೆಂಬರ್ 26, 2019ರಂತೆ)
ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 05 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 03ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಇತರ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06.11.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.11.2019

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+