ಐಬಿಪಿಎಸ್ ನೇಮಕಾತಿ: 4336 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿವೆ
ಬೆಂಗಳೂರು, ಆಗಸ್ಟ್ 09: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) ಪ್ರೊಬೆಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/058/2019 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
ಸಂಸ್ಥೆ ಹೆಸರು: Institute of Banking Personnel Selection
ಹುದ್ದೆ ಹೆಸರು: Probationary Officers/Management Trainees
ಒಟ್ಟು ಹುದ್ದೆ: 4336
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28.8.2019
ವಿದ್ಯಾರ್ಹತೆ: ಯಾವುದೇ ಪದವಿ, ಎಂಬಿಎ, ಸಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 30 ವರ್ಷಗಳು(ಆಗಸ್ಟ್ 01, 2019)
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಇತರ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 07.08.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28.08.2019
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications